ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಎಲ್ಕೆ ಅಡ್ವಾಣಿ ಅವರಿಗೆ ಇಂದು ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದೆ, ಈ ಬಗ್ಗೆ ಅವರು ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಇದು ಒಬ್ಬ ವ್ಯಕ್ತಿಯಾಗಿ ಮಾತ್ರವಲ್ಲದೆ ನಾನು ಪ್ರತಿಪಾದಿಸಿರುವ ಆದರ್ಶಗಳು ಮತ್ತು ತತ್ವಗಳಿಗೂ ದೊರೆತ ಗೌರವವಾಗಿದೆ ಎಂದು ಅವರು ಹೇಳಿದ್ದಾರೆ.
ಅಧಿಕೃತ ಹೇಳಿಕೆ ನೀಡಿರುವ ಅವರು, “ಇಂದು ನನಗೆ ನೀಡಲಾದ ‘ಭಾರತ ರತ್ನ’ವನ್ನು ಅತ್ಯಂತ ನಮ್ರತೆ ಮತ್ತು ಕೃತಜ್ಞತೆಯಿಂದ ನಾನು ಸ್ವೀಕರಿಸುತ್ತೇನೆ. ಇದು ಒಬ್ಬ ವ್ಯಕ್ತಿಯಾಗಿ ನನಗೆ ಮಾತ್ರವಲ್ಲ, ನನ್ನ ಆದರ್ಶಗಳು ಮತ್ತು ತತ್ವಗಳಿಗೆ ಗೌರವವಾಗಿದೆ. ನನ್ನ ಜೀವನದುದ್ದಕ್ಕೂ ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಸೇವೆ ಸಲ್ಲಿಸಲು ನಾನು ಸ್ಪೂರ್ತಿ ಪಡೆದಿದ್ದೇನೆ” ಎಂದಿದ್ದಾರೆ.
“ನಾನು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಸ್ವಯಂಸೇವಕನಾಗಿ ಸೇರಿದಾಗಿನಿಂದ ಜೀವನದಲ್ಲಿ ನನಗೆ ನಿಯೋಜಿಸಲಾದ ಯಾವುದೇ ಕಾರ್ಯದಲ್ಲಿ ನನ್ನ ಪ್ರೀತಿಯ ದೇಶಕ್ಕೆ ಸಮರ್ಪಿತ ಮತ್ತು ನಿಸ್ವಾರ್ಥ ಸೇವೆಯನ್ನು ಸಲ್ಲಿಸಿದ್ದೇನೆ” ಎಂದು ಅವರು ಹೇಳಿದರು.
1990 ರ ದಶಕದ ಆರಂಭದಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ರಥಯಾತ್ರೆಯನ್ನು ನಡೆಸಿ, ಆ ಮೂಲಕ ಪಕ್ಷವನ್ನು ರಾಷ್ಟ್ರೀಯ ಪ್ರಾಮುಖ್ಯತೆಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಜೆಪಿಯ ಪ್ರಮುಖ ಧುರೀಣ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ನೀಡಿ ಗೌರವಿಸಲಾಯಿತು. ಇದು ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.