ನವದೆಹಲಿ: ಕುಪ್ವಾರದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭೇದಿಸಿದ ಎಲ್ಇಟಿ ಮಾಡ್ಯೂಲ್ನ ಭಯೋತ್ಪಾದನಾ ಘಟಕದ ಪ್ರಮುಖ ಸಂಚುಕೋರರಲ್ಲಿ ಒಬ್ಬನನ್ನು ಪಿಎಸ್-ನವದೆಹಲಿ ರೈಲು ನಿಲ್ದಾಣದಲ್ಲಿನ ಭದ್ರತಾ ಸಿಬ್ಬಂದಿ ಫೆ.4ರಂದು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ರಿಯಾಜ್ ಅಹಮದ್ ಎಂದು ಗುರುತಿಸಲಾಗಿದೆ. ಭಯೋತ್ಪಾದಕ ಹ್ಯಾಂಡ್ಲರ್ಗಳಿಂದ ಎಲ್ಒಸಿಯಾದ್ಯಂತ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಪಡೆಯುವಲ್ಲಿ ಈತ ಖುರ್ಷೀದ್ ಅಹ್ಮದ್ ರಾಥರ್ ಮತ್ತು ಗುಲಾಮ್ ಸರ್ವರ್ ಜೊತೆಗೆ ಸೇರಿ ಸಂಚು ರೂಪಿಸುತ್ತಿದ್ದ ಎಂಬ ಅಂಶ ತನಿಖೆಯಿಂದ ಬಹಿರಂಗವಾಗಿದೆ.
“ಆರೋಪಿ ರಿಯಾಜ್ ಅಹ್ಮದ್ ನಿವೃತ್ತ ಸೇನಾ ಸಿಬ್ಬಂದಿಯಾಗಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಚಟುವಟಿಕೆಗಳನ್ನು ನಡೆಸುವುದಕ್ಕಾಗಿ ಎಲ್ಇಟಿಯ ಭಯೋತ್ಪಾದಕ ನಿರ್ವಾಹಕರಿಂದ ಎಲ್ಒಸಿಯಾದ್ಯಂತ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸ್ವೀಕರಿಸಲು ತನ್ನ ಸಹಚರರೊಂದಿಗೆ ಸಂಚು ರೂಪಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ” ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರ ಯಶಸ್ವಿ ಕಾರ್ಯಾಚರಣೆಯ ನಂತರ ಈತನ ಬಂಧನವಾಗಿದೆ. ಪಾಕ್ ಆಕ್ರಮಿತ ಕಾಶ್ಮೀರದಿಂದ (ಪಿಒಕೆ) ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಘಟಕವನ್ನು ಭೇದಿಸಿದ ನಂತರ ಈತನ ಬಂಧನವಾಗಿದೆ. ವಿವಿಧ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಐವರು ಭಯೋತ್ಪಾದಕ ಸಹಚರರನ್ನು ಈ ಹಿಂದೆ ಕರ್ನಾದಲ್ಲಿ ಬಂಧಿಸಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.