![](https://news13.in/wp-content/uploads/2024/02/loksabha.jpeg)
ನವದೆಹಲಿ: ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ಪರೀಕ್ಷಾ ಪತ್ರಿಕೆಗಳ ಸೋರಿಕೆಯಂತಹ ಮೋಸದ ಅಭ್ಯಾಸಗಳನ್ನು ತಡೆಯಲು ಲೋಕಸಭೆ ಮಂಗಳವಾರ ‘ವಂಚನೆ-ವಿರೋಧಿ’ ಮಸೂದೆಯನ್ನು ಅಂಗೀಕರಿಸಿದೆ.
ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದ್ದು, ರಾಜ್ಯಸಭೆಯಲ್ಲಿ ಇನ್ನು ಮಂಡಿಸಬೇಕಾಗುತ್ತದೆ. ರಾಜ್ಯಸಭೆಯಲ್ಲಿ ಅನುಮೋದನೆ ಪಡೆದ ಬಳಿಕ ಅದನ್ನು ಒಪ್ಪಿಗೆಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಲಾಗುತ್ತದೆ.
ಅಧಿಕಾರಿಗಳೊಂದಿಗೆ ಶಾಮೀಲಾಗಿ ಪರೀಕ್ಷೆಯ ಪತ್ರಿಕೆಗಳನ್ನು ಸೋರಿಕೆ ಮಾಡುವ ಅಥವಾ ಉತ್ತರ ಪತ್ರಿಕೆಗಳನ್ನು ತಿದ್ದುವವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಕೋಟಿ ರೂಪಾಯಿ ದಂಡ ವಿಧಿಸಲಾಗುತ್ತದೆ.
ಕಿರಿಯ ಸಿಬ್ಬಂದಿ ಸಚಿವ ಜಿತೇಂದ್ರ ಸಿಂಗ್ ಅವರು ಕೆಳಮನೆಯಲ್ಲಿ ಈ ಮಸೂದೆ ಮಂಡಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.