ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ರಾಜ್ಯ ಬಿಜೆಪಿ ವತಿಯಿಂದ ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ನೇತೃತ್ವ ವಹಿಸಿದ್ದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್, ಶಾಸಕರು, ವಿಧಾನಪರಿಷತ್ ಸದಸ್ಯರು, ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
ಸಿದ್ದರಾಮಯ್ಯರ ಸರಕಾರಕ್ಕೆ ಧಿಕ್ಕಾರ, ಭ್ರಷ್ಟ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ, ರೈತ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ, ರಾಜ್ಯದ ರೈತರನ್ನು ಕಣ್ಣೀರು ಹಾಕಿಸುವ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ ಕೂಗಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.