ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಹಿಂದೆಂದೂ ನಡೆಯದಿರುವ ಪ್ರಮಾಣದಲ್ಲಿ ಭೂ ದಾಖಲೆಗಳ ಡಿಜಿಟಲೀಕರಣ ನಡೆದಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.
ನವದೆಹಲಿಯಲ್ಲಿ ಲ್ಯಾಂಡ್ ಮ್ಯಾನೇಜ್ಮೆಂಟ್ ಆಧುನೀಕರಣದಲ್ಲಿ ಉತ್ತಮ ಅಭ್ಯಾಸಗಳ ಹಂಚಿಕೆ ಕುರಿತು ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನದ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಡಿಜಿಟಲ್ ಭೂ ದಾಖಲೆಗಳಲ್ಲಿ ಸೈಬರ್ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ರಾಜ್ಯ ಸಚಿವ ಕಪಿಲ್ ಮೊರೇಶ್ವರ ಪಾಟೀಲ್, ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವರಾದ ಸಾಧ್ವಿ ನಿರಂಜನ್ ಜ್ಯೋತಿ ಮತ್ತು ಫಗ್ಗನ್ ಸಿಂಗ್ ಕುಲಸ್ತೆ ಉಪಸ್ಥಿತರಿದ್ದರು.
ಸಮಾವೇಶದಲ್ಲಿ ಭೂ ದಾಖಲೆ ಡಿಜಿಟಲೀಕರಣ, ಭೂ-ಆಧಾರ್ ಮತ್ತು ಭೂ ದಾಖಲೆಗಳಲ್ಲಿ ನವೀನ ತಂತ್ರಜ್ಞಾನಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆಗಳು ನಡೆಯಲಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.