ನವದೆಹಲಿ: ವೈಷ್ಣವ ಧರ್ಮ ಮತ್ತು ಶ್ರೀಕೃಷ್ಣನ ಮೇಲಿನ ಪ್ರೀತಿಯನ್ನು ಇಡೀ ಜಗತ್ತಿಗೆ ಕೊಂಡೊಯ್ಯುವಲ್ಲಿ ಶ್ರೀಲ ಪ್ರಭುಪಾದರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಇಂದು ಮಧ್ಯಾಹ್ನ ನವದೆಹಲಿಯ ಭಾರತ ಮಂಟಪದಲ್ಲಿ ಶ್ರೀಲ ಪ್ರಭುಪಾದರ 150 ನೇ ಜನ್ಮದಿನಾಚರಣೆಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ವೈಷ್ಣವ ಸಂತ ಚೈತನ್ಯ ಮಹಾಪ್ರಭುಗಳ ಬೋಧನೆಗಳನ್ನು ಅನುಸರಿಸುವ ಮೂಲಕ ನಾನು ನೆಮ್ಮದಿ ಅನುಭವಿಸಿದ್ದೇನೆ. ಈ ನವಭಾರತದಲ್ಲಿ ಅಭಿವೃದ್ಧಿ ಮತ್ತು ಭಕ್ತಿಯನ್ನು ಅಕ್ಕಪಕ್ಕದಲ್ಲಿ ಕಾಣಬಹುದು ಎಂದು ಒತ್ತಿ ಹೇಳಿದರು.
ಈ ನವ ಭಾರತದಲ್ಲಿ ಜನರು ಆಧುನಿಕತೆ ಮತ್ತು ಅಸ್ಮಿತೆ ಎರಡನ್ನೂ ಸ್ವೀಕರಿಸಿದ್ದಾರೆ . ಜೀವನವು ಭಕ್ತಿ ಮತ್ತು ಜ್ಞಾನದ ಮಾರ್ಗಗಳ ಸುಂದರ ಸಮತೋಲನವಾಗಿದೆ ಎಂದು ಮೋದಿ ಹೇಳಿದರು.
ಈ ಸಂದರ್ಭದಲ್ಲಿಮೋದಿ ಅವರು ಆಧ್ಯಾತ್ಮಿಕ ಗುರು ಶ್ರೀಲ ಪ್ರಭುಪಾದರ ಗೌರವಾರ್ಥ ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು.
ಆಚಾರ್ಯ ಶ್ರೀಲ ಪ್ರಭುಪಾದರು ಗೌಡಿಯ ಮಿಷನ್ ಸಂಸ್ಥಾಪಕರು, ಅವರು ವೈಷ್ಣವ ನಂಬಿಕೆಯ ಮೂಲಭೂತ ತತ್ವಗಳನ್ನು ಸಂರಕ್ಷಿಸುವ ಮತ್ತು ಹರಡುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಶ್ರೀ ಚೈತನ್ಯ ಮಹಾಪ್ರಭುಗಳ ಬೋಧನೆಗಳನ್ನು ಮತ್ತು ವೈಷ್ಣವರ ಶ್ರೀಮಂತ ಆಧ್ಯಾತ್ಮಿಕ ಪರಂಪರೆಯನ್ನು ಪ್ರಪಂಚದಾದ್ಯಂತ ಪ್ರಚಾರ ಮಾಡುವಲ್ಲಿ ಗೌಡಿಯಾ ಮಿಷನ್ ಮಹತ್ವದ ಪಾತ್ರವನ್ನು ವಹಿಸಿದೆ, ಇದನ್ನು ಹರೇ ಕೃಷ್ಣ ಚಳುವಳಿಯ ಕೇಂದ್ರವನ್ನಾಗಿ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.