ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಇಂದು ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಬೆಂಬಲಿತ ಸ್ವತಂತ್ರ ಅಭ್ಯರ್ಥಿಗಳು 154 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಈ ನಡುವೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾದ ಕಾರಣ ಮಧ್ಯ ರಾತ್ರಿ ಮತ ಎಣಿಕೆಯನ್ನು ತಡೆಹಿಡಿಯಲಾಗಿತ್ತು. ಕೆಲ ಹೊತ್ತು ಡ್ರಾಮಾ ನಡೆದ ಬಳಿಕ ಮತ್ತೆ ಮತ ಎಣಿಕೆಯನ್ನು ಆರಂಭಿಸಲಾಗಿದೆ.
ಟ್ರೆಂಡ್ಗಳ ಪ್ರಕಾರ, ನವಾಜ್ ಷರೀಫ್ ನೇತೃತ್ವದ ಪಿಎಂಎಲ್-ಎನ್ ಸುಮಾರು 50 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಬಿಲಾವಲ್ ಭುಟ್ಟೋ ಅವರ PPP ತಲಾ ಸುಮಾರು 47 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.
ಕಳೆದ ರಾಷ್ಟ್ರೀಯ ಚುನಾವಣೆಯಲ್ಲಿ ಜಯಗಳಿಸಿದ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ನಾಯಕ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬೆಂಬಲಿತ ಅಭ್ಯರ್ಥಿಗಳು ಮತ್ತು ಪ್ರಬಲ ಮಿಲಿಟರಿಯಿಂದ ಬೆಂಬಲಿತವಾಗಿರುವ ಷರೀಫ್ ಅವರ ಪಿಎಂಎಲ್-ಎನ್ ನಡುವೆ ತೀವ್ರ ಸ್ಪರ್ಧೆಗಳು ಕಂಡುಬರುತ್ತಿವೆ. ಇಂದು ಎಣಿಕೆ ಮುಂದುವರಿದಿದ್ದು, ನಾಳೆ ವೇಳೆಗೆ ಸ್ಪಷ್ಟ ಚಿತ್ರಣ ಹೊರಬೀಳುವ ಸಾಧ್ಯತೆ ಇದೆ.
ಪಾಕಿಸ್ಥಾನದಲ್ಲಿ ಸರಳ ಬಹುಮತಕ್ಕೆ ಒಂದು ಪಕ್ಷಕ್ಕೆ ಸಂಸತ್ತಿನಲ್ಲಿ 133 ಸ್ಥಾನಗಳ ಅಗತ್ಯವಿದೆ ಮತ್ತು ಪ್ರಸ್ತುತ ಟ್ರೆಂಡ್ಗಳನ್ನು ನಂಬುವುದಾದರೆ, ಇಮ್ರಾನ್ ಖಾನ್ ಬೆಂಬಲಿತರು ಅಧಿಕಾರಕ್ಕೆ ಬರಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.