ಹೈದರಾಬಾದ್: ಕೆಲವೇ ವಾರಗಳಲ್ಲಿ ಲೋಕಸಭೆ ಚುನಾವಣೆ ಮತ್ತು ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ ನಡೆಯಲಿರುವ ಕಾರಣ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರನ್ನು ಭೇಟಿಯಾದ 24 ಗಂಟೆಗಳ ನಂತರ, ಆಂಧ್ರ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಇಂದು ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
“ಆಂಧ್ರ ಸಿಎಂ ಅವರು ಸಂಸತ್ತಿನ ಸಂಕೀರ್ಣದಲ್ಲಿ ಪ್ರಧಾನಿಯನ್ನು ಭೇಟಿ ಮಾಡಿದರು ಮತ್ತು ಆಂಧ್ರಪ್ರದೇಶಕ್ಕೆ ವಿಶೇಷ ವರ್ಗದ ಸ್ಥಾನಮಾನ ಸೇರಿದಂತೆ ಬಾಕಿ ಉಳಿದಿರುವ ಯೋಜನೆಗಳು ಮತ್ತು ಬೇಡಿಕೆಗಳ ಬಗ್ಗೆ ಚರ್ಚಿಸಿದರು” ಎಂದು ಮೂಲಗಳು ತಿಳಿಸಿವೆ.
ಮೇಲ್ನೋಟಕ್ಕೆ ರೆಡ್ಡಿ ಅವರು ತಮ್ಮ ರಾಜ್ಯಕ್ಕೆ ವಿಶೇಷ ವರ್ಗದ ಸ್ಥಾನಮಾನದ ಬಗ್ಗೆ ಚರ್ಚಿಸಲು ಪ್ರಧಾನಿಯನ್ನು ಭೇಟಿ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ. ಆದರೆ ವಿಶ್ಲೇಷಕರು ಹೇಳುವ ಪ್ರಕಾರ, ಚುನಾವಣೆಯ ನಿಟ್ಟಿನಲ್ಲಿ ಮಹತ್ವದ ಚರ್ಚೆಗಳು ನಡೆದಿರುವ ಸಾಧ್ಯತೆ ಇದೆ.
ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಸಾಧಿಸಲು ಹವಣಿಸುತ್ತಿರುವ ಸಂದರ್ಭದಲ್ಲಿ, ತೆಲುಗು ದೇಶಂ ಪಕ್ಷ (ಟಿಡಿಪಿ) ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದ್ದು, ಕೊನೆಯ ಹಂತದ ಪ್ರಯತ್ನ ಮಾಡಲು ರೆಡ್ಡಿ ರಾಷ್ಟ್ರ ರಾಜಧಾನಿಗೆ ಧಾವಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.