ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆಯಿಂದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ಗೆ ಎರಡು ದಿನಗಳ ಅಧಿಕೃತ ಭೇಟಿ ನೀಡಲಿದ್ದಾರೆ. ಭೇಟಿಯ ಸಮಯದಲ್ಲಿ, ಮೋದಿ ಅವರು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ಉಭಯ ನಾಯಕರು ದೇಶಗಳ ನಡುವಿನ ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನಷ್ಟು ಆಳಗೊಳಿಸಲು, ವಿಸ್ತರಿಸಲು ಮತ್ತು ಬಲಪಡಿಸಲು ಮತ್ತು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುವ ಮಾರ್ಗಗಳನ್ನು ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನಮಂತ್ರಿಯವರು ಯುಎಇಯ ಉಪಾಧ್ಯಕ್ಷರು, ಪ್ರಧಾನ ಮಂತ್ರಿಗಳು ಮತ್ತು ರಕ್ಷಣಾ ಸಚಿವರನ್ನೂ ಭೇಟಿಯಾಗಲಿದ್ದಾರೆ. ಅವರು ದುಬೈನಲ್ಲಿ ನಡೆಯಲಿರುವ ವಿಶ್ವ ಸರ್ಕಾರದ ಶೃಂಗಸಭೆ 2024 ರಲ್ಲಿ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ ಮತ್ತು ಶೃಂಗಸಭೆಯಲ್ಲಿ ವಿಶೇಷ ಮುಖ್ಯ ಭಾಷಣವನ್ನು ಮಾಡಲಿದ್ದಾರೆ.
ಅಲ್ಲದೇ ಅಬುಧಾಬಿಯ ಮೊದಲ ಹಿಂದೂ ದೇವಾಲಯವಾದ ಬೋಚಸನ್ವಾಸಿ ಅಕ್ಷರ ಪುರುಷೋತ್ತಮ್ ಸ್ವಾಮಿನಾರಾಯಣ ಸಂಸ್ಥಾ ಬಿಎಪಿಎಸ್ ಮಂದಿರವನ್ನು ಮೋದಿ ಉದ್ಘಾಟಿಸಲಿದ್ದಾರೆ. ಅಬುಧಾಬಿಯ ಝಾಯೆದ್ ಸ್ಪೋರ್ಟ್ಸ್ ಸಿಟಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರು ಯುಎಇಯಲ್ಲಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು 2015 ರಿಂದ ಯುಎಇಗೆ ಪ್ರಧಾನಿ ಮೋದಿಯವರ ಏಳನೇ ಭೇಟಿ ಮತ್ತು ಕಳೆದ ಎಂಟು ತಿಂಗಳಲ್ಲಿ ಮೂರನೇ ಭೇಟಿಯಾಗಿದೆ.
ಭಾರತ ಮತ್ತು ಯುಎಇಗಳು ಬಲವಾದ ರಾಜಕೀಯ, ಸಾಂಸ್ಕೃತಿಕ ಮತ್ತು ಆರ್ಥಿಕ ಸಂಬಂಧಗಳ ಆಧಾರದ ಮೇಲೆ ನಿಕಟ ಮತ್ತು ಬಹುಮುಖಿ ಸಂಬಂಧಗಳನ್ನು ಹೊಂದಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.