ನವದೆಹಲಿ: ನಮ್ಮ ಸರ್ಕಾರ ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕಗೊಳಿಸಿದೆ. ನಿಗದಿತ ಅವಧಿಯೊಳಗೆ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸರ್ಕಾರ ಪ್ರಯತ್ನಿಸುತ್ತಿದೆ, ಇದರಿಂದಾಗಿ ಪ್ರತಿಯೊಬ್ಬರೂ ತಮ್ಮ ಸಾಮರ್ಥ್ಯಗಳನ್ನು ಪ್ರದರ್ಶಿಸಲು ಸಮಾನ ಅವಕಾಶವನ್ನು ಪಡೆಯುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರೋಜ್ಗಾರ್ ಮೇಳದ ಅಡಿಯಲ್ಲಿ ಹೊಸದಾಗಿ ಸೇರ್ಪಡೆಗೊಂಡವರಿಗೆ ಒಂದು ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದ ನಂತರ ಪ್ರಧಾನಿ ಮಾತನಾಡಿದರು.
ಕಷ್ಟಪಟ್ಟು ದುಡಿದರೆ ತಮಗಾಗಿ ಒಂದು ಸ್ಥಾನವನ್ನು ಕಲ್ಪಿಸಬಹುದು ಎಂಬುದು ಇಂದಿನ ಪ್ರತಿಯೊಬ್ಬ ಯುವಕನಿಗೆ ತಿಳಿದಿದೆ . 2014 ರಿಂದ ಯುವಜನರನ್ನು ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಭಾಗಿಗಳನ್ನಾಗಿ ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆ. 10 ವರ್ಷಗಳಲ್ಲಿ ಹಿಂದಿನ ಸರ್ಕಾರವು ನೀಡಿದ್ದಕ್ಕಿಂತ ನಮ್ಮ ಸರ್ಕಾರ 1.5 ಪಟ್ಟು ಹೆಚ್ಚು ಸರ್ಕಾರಿ ಉದ್ಯೋಗಗಳನ್ನು ನೀಡಿದೆ. ಯುವಕರಿಗೆ ಸರ್ಕಾರಿ ನೌಕರಿ ನೀಡುವ ಕಾರ್ಯ ಭರದಿಂದ ಸಾಗಿದೆ ಎಂದರು.
ಭಾರತೀಯ ರೈಲ್ವೇ ಇಂದು ಒಂದು ದೊಡ್ಡ ಪರಿವರ್ತನೆಯ ಮೂಲಕ ಸಾಗುತ್ತಿದೆ. ಈ ದಶಕದ ಅಂತ್ಯದ ವೇಳೆಗೆ ಭಾರತೀಯ ರೈಲ್ವೇ ಸಂಪೂರ್ಣ ಪರಿವರ್ತನೆಯಾಗಲಿದೆ ಎಂದರು. ಉತ್ತಮ ಸಂಪರ್ಕವು ಆರ್ಥಿಕತೆಯ ಒಟ್ಟಾರೆ ಪ್ರಗತಿಗೆ ಕಾರಣವಾಗುತ್ತದೆ ಎಂದು ಮೋದಿ ಹೇಳಿದರು. ಇದು ಹೊಸ ಉದ್ಯಮಗಳು ಮತ್ತು ಪ್ರವಾಸೋದ್ಯಮವನ್ನು ಬೆಳೆಯಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.
ಭಾರತವು ಈಗ ಮೂರನೇ ಅತಿದೊಡ್ಡ ಸ್ಟಾರ್ಟಪ್ ಪರಿಸರ ವ್ಯವಸ್ಥೆಯನ್ನು ಹೊಂದಿದೆ. ದೇಶವು ಈಗ ಸುಮಾರು 1.25 ಲಕ್ಷ ಸ್ಟಾರ್ಟ್ಅಪ್ಗಳನ್ನು ಹೊಂದಿದೆ ಮತ್ತು ಸ್ಟಾರ್ಟಪ್ಗಳು ಯುವಕರಿಗೆ ಸಾಕಷ್ಟು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿವೆ ಎಂದು ಅವರು ಹೇಳಿದರು.
ವಿಕ್ಷಿತ್ ಭಾರತ್ನ ಪಯಣದಲ್ಲಿ ಪ್ರತಿಯೊಬ್ಬ ಸರ್ಕಾರಿ ಅಧಿಕಾರಿಯೂ ಪ್ರಮುಖ ಪಾತ್ರ ವಹಿಸಬೇಕು. ಇಂದು ಸೇರ್ಪಡೆಗೊಂಡಿರುವ ಒಂದು ಲಕ್ಷ ಮಂದಿ ಹೊಸ ಶಕ್ತಿ ನೀಡಲಿದ್ದಾರೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.