ನವದೆಹಲಿ: ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಸಾವಿರಾರು ರೈತರು ಮಂಗಳವಾರ ಬೆಳಗ್ಗೆ ದೆಹಲಿಗೆ ಟ್ರ್ಯಾಕ್ಟರ್ ಮತ್ತು ಮಣ್ಣು ತೆಗೆಯುವ ಯಂತ್ರಗಳ ಮೂಲಕ ಆಗಮಿಸಿ ಕೇಂದ್ರದ ಕೃಷಿ ನೀತಿಗಳ ವಿರುದ್ಧ ಪ್ರತಿಭಟಿಸಲು ಮುಂದಾಗುತ್ತಿದ್ದಾರೆ. ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಖಾತರಿಪಡಿಸುವ ಕಾನೂನನ್ನು ತರಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ.
ಪಂಜಾಬ್ನೊಂದಿಗೆ ಹರಿಯಾಣವನ್ನು ಸಂಪರ್ಕಿಸುವ ಗಡಿಯಲ್ಲಿ ಭಾರೀ ಭದ್ರತಾ ನಿಯೋಜನೆ ಮಾಡಲಾಗಿದೆ ಮತ್ತು ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದೆ. ಇಲ್ಲಿ ಭದ್ರತೆ ಮುರಿದು ದೆಹಲಿಯತ್ತ ನುಗ್ಗಲು ಹರ ಸಾಹಸಪಡುತ್ತಿದ್ದಾರೆ. ಪೊಲೀಸರ ಕ್ರಮಕ್ಕೆ ಆದರೆ ಇದಕ್ಕೆ ನಾವು ಹಿಂಜರಿಯುವುದಿಲ್ಲ ರಾಷ್ಟ್ರ ರಾಜಧಾನಿಯನ್ನು ತಲುಪಿ ಅಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ರೈತರು ಪ್ರತಿಜ್ಞೆ ಮಾಡಿದ್ದಾರೆ.
ಸೋಮವಾರ ರಾತ್ರಿ ಇಬ್ಬರು ಕೇಂದ್ರ ಸಚಿವರೊಂದಿಗೆ ಐದು ಗಂಟೆಗಳ ಕಾಲ ನಡೆಸಿದ ಸಭೆ ವಿಫಲವಾದ ನಂತರ ರೈತರ ಮೆರವಣಿಗೆ ನಡೆಯುತ್ತಿದೆ. ರೈತರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯುವುದು ಮತ್ತು ಹಿಂದಿನ ಆಂದೋಲನದ ವೇಳೆ ಸಾವನ್ನಪ್ಪಿದವರ ಕುಟುಂಬಗಳಿಗೆ ಪರಿಹಾರ ನೀಡುವುದು ಮುಂತಾದ ರೈತರ ಕೆಲವು ಬೇಡಿಕೆಗಳಿಗೆ ಸಚಿವರಾದ ಪಿಯೂಷ್ ಗೋಯಲ್ ಮತ್ತು ಅರ್ಜುನ್ ಮುಂಡಾ ಒಪ್ಪಿಗೆ ನೀಡಿದರು. ಆದರೆ, ಎಂಎಸ್ಪಿ ಸಮಸ್ಯೆಯನ್ನು ಪರಿಹರಿಸಲು ಸಮಿತಿಯನ್ನು ಒಪ್ಪಿಕೊಳ್ಳುವಂತೆ ರೈತರಿಗೆ ಮನವರಿಕೆ ಮಾಡಲು ಅವರಿಗೆ ಸಾಧ್ಯವಾಗಲಿಲ್ಲ ಎಂದು ವರದಿಗಳು ತಿಳಿಸಿವೆ.
ಇನ್ನೊಂದೆಡೆ ಹರಿಯಾಣ ಪೊಲೀಸರು ದೆಹಲಿಯತ್ತ ಸಾಗುತ್ತಿದ್ದ ಹಲವಾರು ಪ್ರತಿಭಟನಾ ನಿರತ ರೈತರನ್ನು ಬಂಧಿಸಿದ್ದಾರೆ, ಟ್ರ್ಯಾಕ್ಟರ್ ಮತ್ತು ಕೈ ಶಸ್ತ್ರಾಸ್ತ್ರಗಳನ್ನು ಬಳಸಿ ಬಹು-ಪದರದ ಬ್ಯಾರಿಕೇಡ್ಗಳನ್ನು ಉಲ್ಲಂಘಿಸಲು ಪ್ರಯತ್ನಿಸುತ್ತಿರುವುದನ್ನು ಗಮನಿಸಿ ಈ ಬಂಧನ ನಡೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.