ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಮಸೂದೆ, 2024 ಗೆ ತಮ್ಮ ಒಪ್ಪಿಗೆಯನ್ನು ನೀಡಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಬಜೆಟ್ ಅಧಿವೇಶನದಲ್ಲಿ ಮಸೂದೆಯನ್ನು ಸಂಸತ್ತು ಅಂಗೀಕರಿಸಿತು.
ಈ ಮಸೂದೆಯು ಸಾರ್ವಜನಿಕ ಪರೀಕ್ಷೆಗಳಲ್ಲಿ ನಕಲು. ಅಕ್ರಮಗಳನ್ನು ತಡೆಯುವ ಉದ್ದೇಶ ಹೊಂದಿದೆ. ಪಬ್ಲಿಕ್ ಪರೀಕ್ಷೆಗಳು ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್, ಸ್ಟಾಫ್ ಸೆಲೆಕ್ಷನ್ ಕಮಿಷನ್, ರೈಲ್ವೇ ರಿಕ್ರೂಟ್ಮೆಂಟ್ ಬೋರ್ಡ್, ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮತ್ತು ಕೇಂದ್ರ ಸರ್ಕಾರದ ಇಲಾಖೆಗಳು ನಡೆಸುವ ಪರೀಕ್ಷೆಗಳನ್ನು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.
ಯಾವುದೇ ಅನ್ಯಾಯದ ವಿಧಾನಗಳಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ಸಂಚು ಅಥವಾ ಪಿತೂರಿಯನ್ನು ನಿಷೇಧಿಸುವ ಉದ್ದೇಶವನ್ನು ಈ ಮಸೂದೆ ಹೊಂದಿದೆ. ಅನ್ಯಾಯದ ಅರ್ಥವೆಂದರೆ, ಅನಧಿಕೃತ ಪ್ರವೇಶ ಅಥವಾ ಪ್ರಶ್ನೆ ಪತ್ರಿಕೆ ಅಥವಾ ಉತ್ತರ ಪತ್ರಿಕೆಗಳ ಸೋರಿಕೆ, ಸಾರ್ವಜನಿಕ ಪರೀಕ್ಷೆಯ ಸಮಯದಲ್ಲಿ ಅಭ್ಯರ್ಥಿಗೆ ಸಹಾಯ ಮಾಡುವುದು, ಕಂಪ್ಯೂಟರ್ ನೆಟ್ವರ್ಕ್ಗಳನ್ನು ತಿದ್ದುವುದು, ನಕಲಿ ಪರೀಕ್ಷೆಯನ್ನು ನಡೆಸುವುದು, ನಕಲಿ ಪ್ರವೇಶ ಪತ್ರಗಳು ಮತ್ತು ಆಫರ್ ಲೆಟರ್ಗಳನ್ನು ನೀಡುವುದರ ವಿರುದ್ಧ ಈ ಮಸೂದೆ ಇದೆ.
ಸಾರ್ವಜನಿಕ ಪರೀಕ್ಷಾ ವ್ಯವಸ್ಥೆಗಳಿಗೆ ಹೆಚ್ಚಿನ ಪಾರದರ್ಶಕತೆ, ನ್ಯಾಯಸಮ್ಮತತೆ ಮತ್ತು ವಿಶ್ವಾಸಾರ್ಹತೆಯನ್ನು ತರುವುದು ಮತ್ತು ಅಭ್ಯರ್ಥಿಗಳ ಪ್ರಾಮಾಣಿಕ ಮತ್ತು ನಿಜವಾದ ಪ್ರಯತ್ನಗಳಿಗೆ ತಕ್ಕ ಪ್ರತಿಫಲ ಸಿಗುವಂತೆ ಮಾಡುವುದು ಮತ್ತು ಅವರ ಭವಿಷ್ಯವು ಸುರಕ್ಷಿತವಾಗಿದೆ ಎಂದು ಯುವಕರಿಗೆ ಭರವಸೆ ನೀಡುವುದು ಮಸೂದೆಯ ಉದ್ದೇಶವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.