ಅಬುಧಾಬಿ: ಅಬುಧಾಬಿಯಲ್ಲಿ ನಡೆದ ‘ಅಹ್ಲಾನ್ ಮೋದಿ’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಘೋಷಣೆ ಮಾಡಿದ್ದಾರೆ. ಹೊಸ CBSE ಕಚೇರಿಯನ್ನು ದುಬೈನಲ್ಲಿ ಶೀಘ್ರದಲ್ಲೇ ತೆರೆಯಲಾಗುವುದು ಎಂದು ಘೋಷಿಸಿದ್ದಾರೆ.
“ಯುಎಇ ಶಾಲೆಗಳಲ್ಲಿ 1.5 ಲಕ್ಷಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಅಲ್ಲಿ ಸ್ನಾತಕೋತ್ತರ ಕೋರ್ಸ್ ಅನ್ನು ಪ್ರಾರಂಭಿಸಲಾಗಿದೆ. ಕಳೆದ ತಿಂಗಳು ಇಲ್ಲಿ IIT ದೆಹಲಿ ಕ್ಯಾಂಪಸ್ ತೆರೆಯಲಾಗಿದೆ ಮತ್ತು ಹೊಸ CBSE ಕಚೇರಿಯನ್ನು ದುಬೈನಲ್ಲಿ ಶೀಘ್ರದಲ್ಲೇ ತೆರೆಯಲಾಗುವುದು. ಈ ಸಂಸ್ಥೆಗಳು ಇಲ್ಲಿನ ಭಾರತೀಯ ಸಮುದಾಯಕ್ಕೆ ಅತ್ಯುತ್ತಮ ಶಿಕ್ಷಣವನ್ನು ಒದಗಿಸಲು ಸಹಾಯ ಮಾಡುತ್ತವೆ” ಎಂದಿದ್ದಾರೆ.
ಯುಎಇಯಲ್ಲಿ ಅತ್ಯುತ್ತಮ ಶಿಕ್ಷಣವನ್ನು ಒದಗಿಸುವ ಬದ್ಧತೆಯನ್ನು ಒತ್ತಿಹೇಳಿರುವ ಪ್ರಧಾನಿ ನರೇಂದ್ರ ಮೋದಿ, “ಸಮುದಾಯ ಮತ್ತು ಸಂಸ್ಕೃತಿಯ ವಿಷಯದಲ್ಲಿ, ಭಾರತ ಮತ್ತು ಯುಎಇಯ ಸಾಧನೆಗಳು ಜಗತ್ತಿಗೆ ಅನುಕರಿಸಲು ಮಾದರಿಯಾಗಿ ಕಾರ್ಯನಿರ್ವಹಿಸುತ್ತವೆ. ಭಾರತ್ ಮತ್ತು ಯುಎಇ ಭಾಷೆಗಳಲ್ಲೂ ನಿಕಟ ಸಾಮೀಪ್ಯವಿದೆ” ಎಂದರು.
“ನಾನು 2015 ರಲ್ಲಿ ಪ್ರಧಾನ ಮಂತ್ರಿ ಪಟ್ಟವನ್ನು ವಹಿಸಿಕೊಂಡ ಸ್ವಲ್ಪ ಸಮಯದ ನಂತರ ಯುಎಇಗೆ ನನ್ನ ಮೊದಲ ಭೇಟಿಯನ್ನು ಸ್ಪಷ್ಟವಾಗಿ ನೆನಪಿಸಿಕೊಳ್ಳುತ್ತೇನೆ. ಇದು ಮೂರು ದಶಕಗಳ ನಂತರ ಯುಎಇಗೆ ಭಾರತೀಯ ಪ್ರಧಾನಿಯ ಮೊದಲ ಭೇಟಿಯಾಗಿತ್ತು. ಈಗ ಅಧ್ಯಕ್ಷರಾಗಿರುವ ಕ್ರೌನ್ ಪ್ರಿನ್ಸ್, ಅವರ ಐವರು ಸಹೋದರರೊಂದಿಗೆ ವಿಮಾನ ನಿಲ್ದಾಣದಲ್ಲಿ ನನ್ನನ್ನು ಪ್ರೀತಿಯಿಂದ ಸ್ವಾಗತಿಸಿದ್ದು ನೆನಪಿದೆ. ಆ ಭೇಟಿಯ ಸಮಯದಲ್ಲಿ, ನಾನು ಕುಟುಂಬವನ್ನು ಭೇಟಿ ಮಾಡಿದ ಭಾವನೆಯನ್ನು ಅನುಭವಿಸಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.