ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೋಹಾದಲ್ಲಿ ಕತಾರ್ ಪ್ರಧಾನಿ ಶೇಖ್ ಮೊಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಅಲ್ ಥಾನಿ ಅವರೊಂದಿಗೆ ಬುಧವಾರ ರಾತ್ರಿ ಸಭೆಯನ್ನು ನಡೆಸಿದ್ದು, ಉಭಯ ದೇಶಗಳ ನಡುವಿನ ಬಾಂಧವ್ಯವನ್ನು ಬಲಪಡಿಸುವ ಮಾರ್ಗಗಳ ಕುರಿತು ಚರ್ಚಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮದ ಪೋಸ್ಟ್ ಮಾಡಿರುವ ಮೋದಿ ಅವರು, ತಮ್ಮ ಚರ್ಚೆಗಳು ಭಾರತ-ಕತಾರ್ ಸ್ನೇಹವನ್ನು ಹೆಚ್ಚಿಸುವ ಮಾರ್ಗಗಳ ಬಗ್ಗೆ ಕೇಂದ್ರೀಕರಿಸಿದ್ದವು ಎಂದಿದ್ದಾರೆ.
ತಾರ್ ಪ್ರಧಾನಿ ಜೊತೆ ಮೋದಿ ಅವರು ಫಲಪ್ರದ ಮಾತುಕತೆ ನಡೆಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾತನಾಡಿ, ವ್ಯಾಪಾರ ಮತ್ತು ಹೂಡಿಕೆ, ಇಂಧನ, ಹಣಕಾಸು ಇತರ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ವಿಸ್ತರಿಸುವ ಕುರಿತು ಚರ್ಚೆಗಳು ಒಳಗೊಂಡಿವೆ.
ಯುಎಇ ಭೇಟಿಯನ್ನು ಮುಗಿಸಿದ ನಂತರ ಎರಡು ದಿನಗಳ ಕತಾರ್ ಪ್ರವಾಸದಕ್ಕೆ ಮೋದಿ ಅವರು ನಿನ್ನೆ ಸಂಜೆ ದೋಹಾಗೆ ಆಗಮಿಸಿದರು. ಕಳೆದ ರಾತ್ರಿ ಕತಾರ್ ಪ್ರಧಾನಿ ಅವರ ಗೌರವಾರ್ಥ ಆಯೋಜಿಸಿದ್ದ ಔತಣಕೂಟದಲ್ಲಿ ಮೋದಿ ಭಾಗವಹಿಸಿದ್ದರು.
ಇಂದು ಪ್ರಧಾನಿ ಮೋದಿ ಅವರು ಕತಾರ್ ಎಮಿರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರನ್ನು ಭೇಟಿ ಮಾಡಲಿದ್ದು, ದ್ವಿಪಕ್ಷೀಯ ಹಾಗೂ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಮಾತುಕತೆ ನಡೆಸಲಿದ್ದಾರೆ. ತನ್ನನ್ನು ಆತ್ಮೀಯವಾಗಿ ಸ್ವಾಗತಿಸಿದ ದೋಹಾದಲ್ಲಿರುವ ಭಾರತೀಯ ವಲಸಿಗರಿಗೆ ಮೋದಿ ಧನ್ಯವಾದ ಅರ್ಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.