ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ವಿಕಸಿತ ಭಾರತ ವಿಕಸಿತ ರಾಜಸ್ಥಾನ’ ಕಾರ್ಯಕ್ರಮದ ಅಡಿಯಲ್ಲಿ ರಾಜಸ್ಥಾನದಲ್ಲಿ 17,000 ಕೋಟಿ ರೂ.ಗಳ ಬಹುವಿಧದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. ಈ ಯೋಜನೆಗಳು ರಸ್ತೆಗಳು, ರೈಲ್ವೆಗಳು, ಸೌರಶಕ್ತಿ, ವಿದ್ಯುತ್ ಪ್ರಸರಣ, ಕುಡಿಯುವ ನೀರು ಮತ್ತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸೇರಿದಂತೆ ಹಲವಾರು ಪ್ರಮುಖ ಕ್ಷೇತ್ರಗಳನ್ನು ಒಳಗೊಂಡಿವೆ.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ರಾಜಸ್ಥಾನದ ಡಬಲ್ ಇಂಜಿನ್ ಸರ್ಕಾರವು ವೇಗವಾಗಿ ಕೆಲಸ ಮಾಡಲು ಪ್ರಾರಂಭಿಸಿದೆ ಎಂದು ಹೇಳಿದರು. ಇಂದು ಶಂಕುಸ್ಥಾಪನೆ ಹಾಗೂ ಉದ್ಘಾಟನೆಗೊಂಡಿರುವ ಯೋಜನೆಗಳು ರಾಜ್ಯದ ಸಾವಿರಾರು ಯುವಕರಿಗೆ ಉದ್ಯೋಗ ನೀಡಲಿವೆ ಎಂದರು.
ರೈಲು ಮತ್ತು ರಸ್ತೆ ಜಾಲವು ರಾಜಸ್ಥಾನದ ಹಲವು ಜಿಲ್ಲೆಗಳೊಂದಿಗೆ ಸಂಪರ್ಕವನ್ನು ಸುಗಮಗೊಳಿಸುವುದಲ್ಲದೆ, ನೆರೆಯ ರಾಜ್ಯಗಳೊಂದಿಗೆ ರಾಜಸ್ಥಾನದ ಸಂಪರ್ಕವನ್ನು ಬಲಪಡಿಸುತ್ತದೆ ಎಂದು ಪ್ರಧಾನಿ ಹೇಳಿದರು.
ಯುಪಿಎ ಅಧಿಕಾರಾವಧಿಯನ್ನು ಉಲ್ಲೇಖಿಸಿದ ಪ್ರಧಾನಿ, 10 ವರ್ಷಗಳ ಹಿಂದೆ ದೇಶದಲ್ಲಿ ಹತಾಶೆಯ ವಾತಾವರಣವಿತ್ತು. ಆದರೆ ಈಗ ದೇಶವು ದೊಡ್ಡ ಕನಸುಗಳನ್ನು ಮತ್ತು ದೊಡ್ಡ ನಿರ್ಣಯಗಳನ್ನು ತೆಗೆದುಕೊಳ್ಳುತ್ತಿದೆ. ಅಭಿವೃದ್ಧಿ ಹೊಂದಿದ ಭಾರತ ಎನ್ನುವುದು ಕೇವಲ ಪದವಲ್ಲ ಬದಲಾಗಿ ಪ್ರತಿಯೊಂದು ಕುಟುಂಬದ ಬದುಕನ್ನು ಹಸನುಗೊಳಿಸುವ ಅಭಿಯಾನವಾಗಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.