ಬೆಂಗಳೂರು: ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ, ನಿವೃತ್ತ ಪ್ರಾಧ್ಯಾಪಕ ಕೆ.ಟಿ.ಗಟ್ಟಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಮೂಲತಃ ಕಾಸರಗೋಡು ಜಿಲ್ಲೆಯ ಕೂಡ್ಲು ನಿವಾಸಿಯಾಗಿರುವ ಅವರಿಗೆ, ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು, ಪತ್ರಿಕಾ ಕಾದಂಬರಿಗಳ ಮೂಲಕ ಹೆಸರುವಾಸಿಯಾಗಿದ್ದರು ಎಂದು ತಿಳಿಸಿದ್ದಾರೆ.
ಉಡುಪಿಯ ಟಿ.ಎಂ.ಪೈ. ಮಹಾವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಗಟ್ಟಿ ಅವರು, ಭಾರತ ಸರಕಾರದಿಂದ ಪ್ರಾಧ್ಯಾಪಕರಾಗಿ ಇಥಿಯೋಪಿಯಕ್ಕೆ ಪ್ರಯಾಣ ಬೆಳೆಸಿದ್ದರು. ಇಥಿಯೋಪಿಯದಿಂದ ಹಿಂತಿರುಗಿದ ನಂತರ ಉಜಿರೆಯಲ್ಲಿ ನೆಲೆಸಿದ್ದ ಇವರು ಕೃಷಿಯಲ್ಲಿ ತೊಡಗಿದ್ದರು ಎಂದು ವಿವರಿಸಿದ್ದಾರೆ.
ಮೃತರ ಕುಟುಂಬ, ಬಂಧು ಮಿತ್ರರಿಗೆ ದೇವರು ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ; ಅಲ್ಲದೆ ಅವರಿಗೆ ಚಿರಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.