ನವದೆಹಲಿ: ಶಾಂತಿ ಕಾಪಾಡುವಂತೆ ಪ್ರತಿಭಟನೆ ನಿರತ ರೈತರಿಗೆ ಕೇಂದ್ರ ಸರ್ಕಾರ ಮನವಿ ಮಾಡಿದೆ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಕುರಿತು ರೈತರು ನಿರಂತರ ಪ್ರತಿಭಟನೆ ನಡೆಸುತ್ತಿರುವ ನಡುವೆ ಸರ್ಕಾರದ ಈ ಮನವಿ ಬಂದಿದೆ.
ಪ್ರತಿಭಟನೆ ಮಧ್ಯೆ ಶಾಂತಿಯನ್ನು ಕಾಪಾಡಿಕೊಳ್ಳುವಂತೆ ಆಂದೋಲನ ನಡೆಸುತ್ತಿರುವ ರೈತರನ್ನು ಸರ್ಕಾರ ಒತ್ತಾಯಿಸಿದೆ.
ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಕೃಷಿ ಸಚಿವ ಅರ್ಜುನ್ ಮುಂಡಾ, ಒಟ್ಟಾಗಿ ಶಾಂತಿಯುತ ಪರಿಹಾರ ಕಂಡುಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು. ರೈತ ಮುಖಂಡರೊಂದಿಗೆ ಚರ್ಚೆ ನಡೆಸಿ ಹಲವು ಪ್ರಸ್ತಾವನೆಗಳನ್ನು ಚರ್ಚಿಸಲಾಗಿದೆ ಎಂದು ತಿಳಿಸಿದರು. ಕೇಂದ್ರದ ಪ್ರಸ್ತಾವನೆಗಳಿಂದ ರೈತರು ತೃಪ್ತರಾಗಿಲ್ಲ ಎಂದು ಸರ್ಕಾರಕ್ಕೆ ತಿಳಿದು ಬಂದಿದೆ, ಆದರೆ ಚರ್ಚೆ ಮುಂದುವರೆಸಿ ಶಾಂತಿಯುತವಾಗಿ ಪರಿಹಾರ ಕಂಡುಕೊಳ್ಳಬೇಕು ಎಂದು ಸಚಿವರು ಹೇಳಿದರು.
ಇತ್ತೀಚೆಗೆ, ರೈತ ಮುಖಂಡರೊಂದಿಗಿನ ಮಾತುಕತೆಯ ಸಂದರ್ಭದಲ್ಲಿ, ಕೇಂದ್ರ ಸರ್ಕಾರವು ಬೇಳೆಕಾಳುಗಳು, ಮೆಕ್ಕೆಜೋಳ ಮತ್ತು ಹತ್ತಿ ಬೆಳೆಗಳನ್ನು ತನ್ನ ಏಜೆನ್ಸಿಗಳ ಮೂಲಕ ಐದು ವರ್ಷಗಳವರೆಗೆ ಎಂಎಸ್ಪಿಯಲ್ಲಿ ಖರೀದಿಸಲು ಪ್ರಸ್ತಾಪಿಸಿತ್ತು. ಆದರೆ, ಈ ಪ್ರಸ್ತಾವನೆಯನ್ನು ರೈತ ಮುಖಂಡರು ತಿರಸ್ಕರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.