ಬೆಂಗಳೂರು: ಈ ಸರಕಾರಕ್ಕೆ ಅಧಿಕಾರಿಗಳ ಮೇಲೆ ಹಿಡಿತ ಇಲ್ಲ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಟೀಕಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಜ್ಞಾನದೇಗುಲ ಕುರಿತ ಘೋಷವಾಕ್ಯ ಬದಲಾವಣೆ ವಿಚಾರ ತಮಗೆ ತಿಳಿದಿಲ್ಲ, ನನಗೆ ಐಡಿಯ ಇಲ್ಲ ಎಂದು ಸದನದಲ್ಲಿ ಸಿಎಂ ತಿಳಿಸಿದ್ದಾರೆ. ಈಗ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಆದೇಶ ನೀಡಿದ್ದಾರೆ. ಇಂಥ ಅನೇಕ ಯಡವಟ್ಟುಗಳನ್ನು ಸರಕಾರ ಮಾಡಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ನಮ್ಮ ತೆರಿಗೆ ನಮ್ಮ ಹಕ್ಕು ಎಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ಸಿದ್ದರಾಮಯ್ಯ ಮತ್ತು ಅವರ ಸಂಪುಟದ ಸದಸ್ಯರು ಕೇರಳ ರಾಜ್ಯದ ವಯನಾಡಿನಲ್ಲಿ ಆನೆ ತುಳಿತಕ್ಕೆ ಸಿಲುಕಿ ಮೃತ ವ್ಯಕ್ತಿಗೆ ರಾಹುಲ್ ಗಾಂಧಿಯವರ ಸೂಚನೆಯಂತೆ ಪರಿಹಾರ ನೀಡಿದ್ದಾರೆ. ವಿನಾ ಕಾರಣ ಪ್ರತಿಭಟನೆ ಮಾಡಿದ್ದು ಇದರಿಂದ ಗೊತ್ತಾಗುತ್ತದೆ ಎಂದು ನುಡಿದರು.
ನಮ್ಮ ತೆರಿಗೆ ಹಣವನ್ನು ವಯನಾಡಿನ ಮೃತರಿಗೆ ಕೊಟ್ಟದ್ದು ಯಾಕೆ ಎಂಬ ಪ್ರಶ್ನೆಗೆ ಉತ್ತರ ಕೊಡಿ ಎಂದು ಅವರು ಒತ್ತಾಯಿಸಿದರು. ಕೇರಳ ಮಾತ್ರವಲ್ಲದೆ ತಮಿಳುನಾಡು ಮತ್ತಿತರ ರಾಜ್ಯಗಳಲ್ಲಿ ರಾಹುಲ್ ಗಾಂಧಿಯವರು ಹೇಳಿದ್ದಾರೆಂದು ನಾವು ಪರಿಹಾರ ನೀಡಲು ಸಾಧ್ಯವೇ? ಎಂದು ಕೇಳಿದರು. ಅಲ್ಲಿನ ರಾಜ್ಯ ಸರಕಾರ ಪರಿಹಾರ ಕೊಟ್ಟೇ ಕೊಡುತ್ತದೆ ಎಂದು ತಿಳಿಸಿದರು. ಕಾಂಗ್ರೆಸ್ ಸರಕಾರ ಇಲ್ಲಿದೆ ಎಂಬ ಒಂದೇ ಒಂದು ಕಾರಣಕ್ಕೆ ಇಲ್ಲಿಂದ ಪರಿಹಾರ ನೀಡುವುದು ತಪ್ಪು ಎಂದೂ ಅವರು ಅಭಿಪ್ರಾಯಪಟ್ಟರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.