ನವದೆಹಲಿ: ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್ ಖಾತೆಯಿಂದ 65 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಆಡಳಿತರೂಢ ಬಿಜೆಪಿ ಮೇಲೆ ಗೂಬೆ ಕೂರಿಸುತ್ತಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.
ನವದೆಹಲಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲಾ, ಆದಾಯ ತೆರಿಗೆ ಇಲಾಖೆ ಕೈಗೊಂಡಿರುವ ತೆರಿಗೆ ವಸೂಲಾತಿ ಪ್ರಕ್ರಿಯೆಯು ಕಾನೂನುಬದ್ಧವಾಗಿದೆ ಮತ್ತು ಪಕ್ಷದಿಂದ ಬಾಕಿ ಇರುವ ತೆರಿಗೆಯನ್ನು ವಸೂಲಿ ಮಾಡಲು ಇಲಾಖೆಯು ಎಲ್ಲಾ ಕಾನೂನು ನಿಬಂಧನೆಗಳನ್ನು ಹೊಂದಿದೆ ಎಂದಿದ್ದಾರೆ.
ಅಲ್ಲದೇ ಕಾಂಗ್ರೆಸ್ ಪಕ್ಷವು ತನ್ನ ಬೇಜವಾಬ್ದಾರಿಯನ್ನು ಬಿಂಬಿಸುವ ತೆರಿಗೆ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದರು. ಕಾಂಗ್ರೆಸ್ ಕಾನೂನು ಮತ್ತು ಸಂವಿಧಾನಕ್ಕಿಂತ ತಾನು ಮೇಲು ಎಂದು ಭಾವಿಸಿದಂತಿದೆ ಎಂದಿದ್ದಾರೆ.
ಇದಕ್ಕೂ ಮುನ್ನ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಲೋಕಸಭೆ ಚುನಾವಣೆಗೂ ಮುನ್ನ ಸರ್ಕಾರ ವಿರೋಧ ಪಕ್ಷವನ್ನು ಹತ್ತಿಕ್ಕಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.