ಗುವಾಹಟಿ: ಸ್ವತಂತ್ರ ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆಯ ಶಾಸನವನ್ನು ಅಂಗೀಕರಿಸಿದ ಮೊದಲ ರಾಜ್ಯವಾಗಿ ಉತ್ತರಾಖಂಡ ಹೊರಹೊಮ್ಮಿದ ಮೂರು ವಾರಗಳ ನಂತರ, ಅಸ್ಸಾಂ ಇದೇ ರೀತಿಯ ಕಾನೂನು ತರುವಲ್ಲಿ ತನ್ನ ಮೊದಲ ಹೆಜ್ಜೆ ಇಟ್ಟಿದೆ ಮತ್ತು ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ.
ಶುಕ್ರವಾರ ಈ ಕುರಿತು ಘೋಷಣೆ ಮಾಡಿದ ಅಸ್ಸಾಂ ಸಚಿವ ಜಯಂತ ಮಲ್ಲಾ ಬರುವಾ ಅವರು, ಕ್ಯಾಬಿನೆಟ್ ಈ ನಿರ್ಧಾರ ಕೈಗೊಂಡಿದೆ. ಫೆಬ್ರವರಿ 28ರವರೆಗೆ ಅಧಿವೇಶನ ನಡೆಯಲಿರುವ ಅಸ್ಸಾಂ ವಿಧಾನಸಭೆಯಲ್ಲಿ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಫೆಬ್ರವರಿ 7 ರಂದು ಉತ್ತರಾಖಂಡ ಮಸೂದೆಯನ್ನು ಅಂಗೀಕರಿಸಿದ ನಂತರ ಸೇರಿದಂತೆ ಹಲವು ಬಾರಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಅಸ್ಸಾಂ ಏಕರೂಪ ನಾಗರಿಕ ಸಂಹಿತೆಯ ಮೇಲೆ ಶಾಸನವನ್ನು ತರಲು ಯೋಜಿಸುತ್ತಿದೆ ಎಂದು ಹೇಳಿದ್ದರು. ಈ ಬಗ್ಗೆ ಮಾಹಿತಿ ನೀಡಿದ್ದ ಬರುವಾ ಅವರು, “ಬಹಳ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಯುಸಿಸಿಗೆ ಅನುಗುಣವಾಗಿ ತೆಗೆದುಕೊಳ್ಳಲಾಗಿದೆ. ಅಸ್ಸಾಂ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯಿದೆ, 1935, ರದ್ದುಗೊಳಿಸಲಾಗುವುದು ಮತ್ತು ಯಾವುದೇ ಮುಸ್ಲಿಂ ವಿವಾಹ ಅಥವಾ ವಿಚ್ಛೇದನವನ್ನು ಕಾಯಿದೆಯಡಿಯಲ್ಲಿ ನೋಂದಾಯಿಸಲಾಗುವುದಿಲ್ಲ. ಅಂತಹ ಎಲ್ಲಾ ವಿಷಯಗಳು ವಿಶೇಷ ವಿವಾಹ ಕಾಯಿದೆಯ ಅಡಿಯಲ್ಲಿ ಇರಬೇಕೆಂದು ನಾವು ಬಯಸುತ್ತೇವೆ” ಎಂದಿದ್ದಾರೆ.
ಬಾಲ್ಯವಿವಾಹಗಳನ್ನು ಕಡಿಮೆ ಮಾಡಲು ಈ ನಿರ್ಧಾರವು ಸಹಾಯ ಮಾಡುತ್ತದೆ ಎಂದು ಹೇಳಿದ ಸಚಿವರು, ಕಾಯಿದೆಯಡಿ ವಿವಾಹಗಳನ್ನು ನೋಂದಾಯಿಸುತ್ತಿರುವ 94 ಮುಸ್ಲಿಂ ರಿಜಿಸ್ಟ್ರಾರ್ಗಳಿಗೆ ಏಕ ಬಾರಿಯ ಪರಿಹಾರವಾಗಿ 2 ಲಕ್ಷ ರೂಪಾಯಿಗಳನ್ನು ನೀಡಲಾಗುವುದು ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.