ಡೆಹ್ರಾಡೂನ್: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಭಾನುವಾರ ಡೆಹ್ರಾಡೂನ್ನ ಚಿತ್ರಮಂದಿರದಲ್ಲಿ ಸಂಪುಟ ಸದಸ್ಯರೊಂದಿಗೆ ‘ಆರ್ಟಿಕಲ್ 370’ ಚಲನಚಿತ್ರವನ್ನು ವೀಕ್ಷಿಸಿದರು. ಮುಖ್ಯಮಂತ್ರಿ ಧಾಮಿ ಚಲನಚಿತ್ರವನ್ನು ಶ್ಲಾಘಿಸಿ ಸಾರ್ವಜನಿಕರು ವೀಕ್ಷಿಸುವಂತೆ ಮನವಿ ಮಾಡಿದರು. ಈ ಹಿಂದೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ರಾಜಕೀಯ ತಪ್ಪುಗಳನ್ನು ಚಿತ್ರ ಬಿಂಬಿಸುತ್ತದೆ ಎಂದು ಹೇಳಿದರು.
“ಪಿಎಂ ಮೋದಿಯವರ ಆಡಳಿತದಲ್ಲಿ 370 ನೇ ವಿಧಿಯನ್ನು ತೆಗೆದುಹಾಕಿದ್ದು ಬಹಳ ಉತ್ತಮವಾದ ನಿರ್ಧಾರವಾಗಿದೆ. ಈ ಚಿತ್ರವು ಜಮ್ಮು ಮತ್ತು ಕಾಶ್ಮೀರದಲ್ಲಿನ ಪರಿಸ್ಥಿತಿಯನ್ನು ವಿವರಿಸುತ್ತದೆ. ಕಠಿಣ ಪರಿಸ್ಥಿತಿಗಳಲ್ಲಿ ಭದ್ರತಾ ಪಡೆಗಳು ಹೇಗೆ ಕೆಲಸ ಮಾಡುತ್ತಿದ್ದವು, ಸಾವಿರಾರು ಜನರು ಹೇಗೆ ಕೊಲ್ಲಲ್ಪಟ್ಟರು ಎಂಬುದನ್ನು ತೋರಿಸುತ್ತದೆ. ಅಲ್ಲಿ ನಡೆದಿರುವ ರಾಜಕೀಯ ಅಕ್ರಮಗಳನ್ನು ತೋರಿಸಲಾಗಿದೆ. ಒಳ್ಳೆಯ ಸಿನಿಮಾ ಇದಾಗಿದ್ದು ಎಲ್ಲರೂ ನೋಡಬೇಕು” ಎಂದು ಸಿಎಂ ಧಾಮಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ನಟಿ ಯಾಮಿ ಗೌತಮ್ ಅವರ ಆಕ್ಷನ್ ಪೊಲಿಟಿಕಲ್ ಥ್ರಿಲ್ಲರ್ ಚಿತ್ರ ‘ಆರ್ಟಿಕಲ್ 370’ ಅನ್ನು ಗಲ್ಫ್ ರಾಷ್ಟ್ರಗಳಲ್ಲಿ ನಿಷೇಧಿಸಲಾಗಿದೆ.
‘ಆರ್ಟಿಕಲ್ 370’ ದೇಶೀಯ ಮತ್ತು ಸಾಗರೋತ್ತರ ಗಲ್ಲಾಪೆಟ್ಟಿಗೆಯಲ್ಲಿ ಯಶಸ್ವಿ ಸವಾರಿ ಮಾಡುತ್ತಿದ್ದು, ಪ್ರೇಕ್ಷಕರು ಮತ್ತು ವಿಮರ್ಶಕರ ಮೆಚ್ಚುಗೆಯನ್ನು ಗಳಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.