ನವದೆಹಲಿ: 2019 ರಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ನೇ ವಿಧಿಯನ್ನು ತೆಗೆದುಹಾಕಿ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಕಾಶ್ಮೀರ ಕಣಿವೆಗೆ ಮುಂದಿನ ವಾರ ಭೇಟಿ ನೀಡಲಿದ್ದಾರೆ.
ಮಾರ್ಚ್ 7 ರಂದು ಶ್ರೀನಗರದಲ್ಲಿ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ ಮತ್ತು ಅವರ ಪ್ರವಾಸದ ಸಮಯದಲ್ಲಿ ವಿವಿಧ ಯೋಜನೆಗಳನ್ನು ಪ್ರಾರಂಭಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
“ಪ್ರಧಾನಿ ಬಂದು ತಮ್ಮ ಭಾಷಣ ಮಾಡಬೇಕೆಂಬುದು ಇಲ್ಲಿನ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಈಗ ಮಾರ್ಚ್ 7 ರಂದು ಅವರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ” ಎಂದು ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಮುಖ್ಯಸ್ಥ ರವೀಂದರ್ ರೈನಾ ತಿಳಿಸಿದ್ದಾರೆ.
ಪ್ರಸ್ತುತ ಯೋಜನೆಯ ಪ್ರಕಾರ ಶೇರ್-ಇ-ಕಾಶ್ಮೀರ್ ಅಂತರಾಷ್ಟ್ರೀಯ ಸಮ್ಮೇಳನ ಕೇಂದ್ರವನ್ನು ಪ್ರಧಾನಿ ಭೇಟಿಯ ಸ್ಥಳವಾಗಿ ಅಂತಿಮಗೊಳಿಸಲಾಗಿದೆ. ವ್ಯಾಪಕ ಭದ್ರತಾ ವ್ಯವಸ್ಥೆಗಳು ನಡೆಯುತ್ತಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ. ಪೊಲೀಸರು ಮತ್ತು ಅರೆಸೇನಾ ಪಡೆ ಸಿಬ್ಬಂದಿ ಅನೇಕ ಸ್ಥಳಗಳಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.