ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನ, ಮೊದಲ ಬಾರಿಯ ಮತದಾರರು ತಮ್ಮ ಹಕ್ಕು ಚಲಾಯಿಸಲು ಮತ್ತು ಚುನಾವಣಾ ಪ್ರಕ್ರಿಯೆಯನ್ನು ಹೆಚ್ಚು ಭಾಗವಹಿಸುವಂತೆ ಮಾಡಲು ಕೇಂದ್ರವು ಮಂಗಳವಾರದಿಂದ ರಾಷ್ಟ್ರೀಯ ಅಭಿಯಾನವನ್ನು ಪ್ರಾರಂಭಿಸಿದೆ.
ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮತ್ತು ಕೇಂದ್ರ ಶಿಕ್ಷಣ ಸಚಿವಾಲಯವು “ಬನೇಗಾ ದೇಶ್ ಮಹಾನ್, ಜಬ್ ವೋಟ್ ಕರೆಂಗೆ ಹಮ್” ಎಂಬ ಘೋಷವಾಕ್ಯ ಹೊಂದಿದ ಉಪಕ್ರಮವನ್ನು ಆರಂಭಿಸಿದೆ. ದೇಶದ ಸುಮಾರು 1.85 ಕೋಟಿ ಮೊದಲ ಬಾರಿಗೆ ಮತ ಚಲಾಯಿಸಲು ಅರ್ಹತೆ ಹೊಂದಿರುವ ಮತದಾರರನ್ನು ಗುರಿಯಾಗಿರಿಸಿ ಮುಂಬರುವ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಉಪಕ್ರಮವನ್ನು ಆರಂಭಿಸಲಾಗಿದೆ.
”ನಮ್ಮ ಚುನಾವಣಾ ಪ್ರಕ್ರಿಯೆಯನ್ನು ಇನ್ನಷ್ಟು ಪಾಲ್ಗೊಳ್ಳುವಂತೆ ಮಾಡೋಣ. ಮೊದಲ ಬಾರಿಗೆ ಮತದಾರರಲ್ಲಿ ತಮ್ಮದೇ ಆದ ಶೈಲಿಯಲ್ಲಿ ಸಂದೇಶವನ್ನು ಹರಡಲು ನಾನು ಎಲ್ಲಾ ವರ್ಗದ ಜನರಿಗೆ ಕರೆ ನೀಡುತ್ತೇನೆ,” ಎಂದು ಪ್ರಧಾನಿ ನರೇಂದ್ರ ಮೋದಿ ಅವರು #MeraPehlaVoteDeshKeLiye ಹ್ಯಾಶ್ಟ್ಯಾಗ್ ಬಳಸಿ X ನಲ್ಲಿ ಪೋಸ್ಟ್ ಮಾಡಿದ್ದಾರೆ.
ರಾಷ್ಟ್ರವು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬಕ್ಕೆ ಸಜ್ಜಾಗುತ್ತಿರುವಾಗ, #ಮೇರಾ ಪೆಹ್ಲಾ ವೋಟ್ ದೇಶ್ ಕೇಲಿಯೇʼ ಅಭಿಯಾನಕ್ಕೆ ಸೇರಲು ಮತ್ತು ಯುವ ಮತದಾರರು ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಚಲಾಯಿಸಲು ಪ್ರೋತ್ಸಾಹಿಸಲು ನಾನು ನಿಮ್ಮೆಲ್ಲರನ್ನು ಕೋರುತ್ತೇನೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.