ಗಾಂಧೀನಗರ: ಸಮುದ್ರದ ಮೂಲಕ ದೇಶದೊಳಗೆ ಪ್ರವೇಶಿಸಬಹುದಾದ ಅಪಾಯಗಳ ವಿರುದ್ಧ ನಿರಂತರ ಹೋರಾಟ ನಡೆಸುತ್ತಿರುವ ಭಾರತೀಯ ನೌಕಾಸೇನೆ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಭಾರೀ ಪ್ರಮಾಣದ ಮಾದಕವಸ್ತು ಕಳ್ಳಸಾಗಾಣೆಯನ್ನು ತಡೆಹಿಡಿದಿದೆ.
ಜಂಟಿ ಕಾರ್ಯಾಚರಣೆ ನಡೆಸಿದ ಭಾರತೀಯ ನೌಕಾಪಡೆ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಮಂಗಳವಾರ ಗುಜರಾತ್ನ ಪೋರಬಂದರ್ ಬಳಿ ಹಡಗೊಂದರಿಂದ ಸುಮಾರು 3,300 ಕೆಜಿ ಡ್ರಗ್ಸ್ ವಶಪಡಿಸಿಕೊಂಡಿದೆ ಎಂದು ವರದಿಗಳು ತಿಳಿಸಿವೆ.
ಇದು ಇತ್ತೀಚಿನ ದಿನಗಳಲ್ಲಿ ವಶಪಡಿಸಿಕೊಳ್ಳಲಾದ ಅತಿದೊಡ್ಡ ಮಾದಕವಸ್ತು ಎಂದು ನೌಕಾಪಡೆ ತಿಳಿಸಿದೆ.
ನೌಕಾಪಡೆಯು ಕಾರ್ಯಾಚರಣೆ ನಡೆಸಿ ಸಣ್ಣ ಹಡಗನ್ನು ತಡೆದು 3089 ಕೆಜಿ ಚರಸ್, 158 ಕೆಜಿ ಮೆಥಾಂಫೆಟಮೈನ್ ಮತ್ತು 25 ಕೆಜಿ ಮಾರ್ಫಿನ್ ಅನ್ನು ವಶಪಡಿಸಿಕೊಂಡಿದೆ. ಹಡಗಿನ ಐವರು ಸಿಬ್ಬಂದಿಗಳಾದ ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಲಾಗಿದೆ. ವಶಪಡಿಸಿಕೊಂಡ ಡ್ರಗ್ಸ್ನ ಒಟ್ಟು ಮೌಲ್ಯವನ್ನು ಅಧಿಕಾರಿಗಳು ಇನ್ನೂ ನಿರ್ದಿಷ್ಟಪಡಿಸದಿದ್ದರೂ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಕೆಜಿ ಚರಸ್ನ ಬೆಲೆ ರೂ7 ಕೋಟಿ ಎಂದು ಸುದ್ದಿ ಸಂಸ್ಥೆ ಹೇಳಿದೆ.
ಅಂತಾರಾಷ್ಟ್ರೀಯ ಕಡಲ ಗಡಿ ರೇಖೆ ಬಳಿ ಅರಬ್ಬಿ ಸಮುದ್ರದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಗುಜರಾತ್ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.