ನವದೆಹಲಿ: ದಿ ಇಂಡಿಯನ್ ಎಕ್ಸ್ಪ್ರೆಸ್ ಪ್ರಕಟಿಸಿದ ಪಟ್ಟಿಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರು ಅತ್ಯಂತ ಪ್ರಭಾವಿ ಭಾರತೀಯರಾಗಿ ಮುಂದುವರೆದಿದ್ದಾರೆ, ನಂತರದ ಸ್ಥಾನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಇದ್ದಾರೆ.
ಟಾಪ್ 10 ಪಟ್ಟಿಯು ಪ್ರಧಾನವಾಗಿ ಆರ್ಎಸ್ಎಸ್ ಮತ್ತು ಬಿಜೆಪಿ ದಿಗ್ಗಜರಿಂದ ಆವರಿಸಲ್ಪಟ್ಟಿದೆ ಎಂಬುದು ವಿಶೇಷ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ಉದ್ಯಮಿ ಗೌತಮ್ ಅದಾನಿ ಕೂಡ ಪಟ್ಟಿಯಲ್ಲಿ ಸೇರಿದ್ದಾರೆ.
ಡಿವೈ ಚಂದ್ರಚೂಡ ನಾಲ್ಕನೇ ಸ್ಥಾನದಲ್ಲಿ ಇದ್ದರೆ, ಎಸ್ ಜೈಶಂಕರ್ ಐದನೇ ಸ್ಥಾನದಲ್ಲಿ ಇದ್ದಾರೆ. ಆರನೇ ಸ್ಥಾನದಲ್ಲಿ ಯೋಗಿ ಆದಿತ್ಯನಾಥ್, ಏಳನೇ ಸ್ಥಾನದಲ್ಲಿ ರಾಜನಾಥ್ ಸಿಂಗ್, ಎಂಟನೇ ಸ್ಥಾನದಲ್ಲಿ ನಿರ್ಮಲಾ ಸೀತಾರಾಮನ್, ಒಂಬತ್ತನ್ನೇ ಸ್ಥಾನದಲ್ಲಿ ಜೆಪಿ ನಡ್ಡಾ, ಹತ್ತನೇ ಸ್ಥಾನದಲ್ಲಿ ಗೌತಮ್ ಅದಾನಿ ಇದ್ದಾರೆ.
ನಂತರದ ಸ್ಥಾನದಲ್ಲಿ ಮುಖೇಶ್ ಅಂಬಾನಿ, ಪಿಯೂಷ್ ಗೋಯಲ್, ಅಶ್ವಿನಿ ವೈಷ್ಣವ್, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿ, ಅಜಿತ್ ದೋವಲ್, ಅರವಿಂದ್ ಕೇಜ್ರಿವಾಲ್, ಶಕ್ತಿಕಾಂತ ದಾಸ್ ಇದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.