ನವದೆಹಲಿ: 2022 ರಲ್ಲಿ ದೆಹಲಿಯಲ್ಲಿ ಅಪಘಾತಕ್ಕೆ ಒಳಗಾದ ಶೇಕಡಾ 40 ರಷ್ಟು ಹಿಂಬದಿ ಸವಾರರು ಹೆಲ್ಮೆಟ್ಗಳನ್ನು ಧರಸದೆ ತಲೆಗೆ ಗಾಯಗಳಾಗಿ ಸಾವಿಗೀಡಾಗಿದ್ದಾರೆ ಎಂದು ದೆಹಲಿ AIIMS ಟ್ರಾಮಾ ಸೆಂಟರ್ನಲ್ಲಿ ಸಂಗ್ರಹಿಸಲಾದ ಮಾಹಿತಿ ತಿಳಿಸಿದೆ.
ಸುಮಾರು 85 ರಷ್ಟು ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ಗಳನ್ನು ಬಳಸಿದರೆ, ಉಳಿದವರು ಧರಿಸದೇ ತಲೆಗೆ ಗಾಯಗಳನ್ನು ಮಾಡಿಕೊಳ್ಳುತ್ತಿದ್ದಾರೆ ಎಂದು AIIMS ಟ್ರಾಮಾ ಸೆಂಟರ್ ಮುಖ್ಯಸ್ಥ ಡಾ ಕಮ್ರಾನ್ ಫಾರೂಕ್ ಹೇಳಿದ್ದಾರೆ.
ಜನವರಿ 21 ರಿಂದ ಡಿಸೆಂಬರ್ 22 ರ ನಡುವೆ ಕೇಂದ್ರದಲ್ಲಿ ಸಂಗ್ರಹಿಸಿದ ಡೇಟಾವನ್ನು ಅವರು ಉಲ್ಲೇಖಿಸಿ ಈ ಮಾಹಿತಿಯನ್ನು ನೀಡಿದ್ದಾರೆ.
ಅಂಕಿಅಂಶಗಳ ಪ್ರಕಾರ, 2022 ರಲ್ಲಿ ಆಸ್ಪತ್ರೆಗೆ ಕರೆತರಲಾದ ಸುಮಾರು 82 ಪ್ರತಿಶತದಷ್ಟು ರೋಗಿಗಳು ರಸ್ತೆ ಅಪಘಾತಗಳಿಗೆ ಒಳಗಾಗಿದ್ದಾರೆ ಎಂದು ಅವರು ತಿಳಿಸಿದರು.
2022 ರಲ್ಲಿ ಆಸ್ಪತ್ರೆಯು 53,541 ಆಘಾತಕ್ಕೊಳಗಾದ ರೋಗಿಗಳನ್ನು ಸ್ವೀಕರಿಸಿದೆ, ಅದರಲ್ಲಿ ಸುಮಾರು 25 ಪ್ರತಿಶತದಷ್ಟು ಜನರು ರಸ್ತೆ ಅಪಘಾತಕ್ಕೆ ಬಲಿಯಾದವರು. ರಸ್ತೆ ಅಪಘಾತದಲ್ಲಿ ಬಲಿಯಾದವರಲ್ಲಿ ಹೆಚ್ಚಿನವರು 20 ರಿಂದ 40 ವರ್ಷ ವಯಸ್ಸಿನವರು. ಅತ್ಯಂತ ಸಕ್ರಿಯ ಮತ್ತು ಉತ್ಪಾದಕವಾಗಿರುವ ಈ ವಯೋಮಾನವು ಅಪಘಾತಗಳಿಗೆ ಬಲಿಯಾಗುವುದರಿಂದ ಅವರ ಕುಟುಂಬಗಳ ಮೇಲೆ ಮಾತ್ರವಲ್ಲದೆ ದೇಶದ ಆರ್ಥಿಕತೆಯ ಮೇಲೂ ಹೆಚ್ಚಿನ ಪರಿಣಾಮ ಬೀರುತ್ತದೆ ಎಂದು ಡಾ ಕಮ್ರಾನ್ ಫಾರೂಕ್ ಹೇಳಿದ್ದಾರೆ.
ಹೀಗಾಗಿ ರಸ್ತೆ ಅಪಘಾತಕ್ಕೀಡಾದವರಿಗೆ ತಕ್ಷಣದ ನೆರವು ಮತ್ತು ಚಿಕಿತ್ಸೆ ಸಿಗುವಂತೆ ವ್ಯವಸ್ಥಿತ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.