ನವದೆಹಲಿ: ರೂಫ್ಟಾಪ್ ಸೋಲಾರ್ ಅಳವಡಿಸಲು ಮತ್ತು ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ಒದಗಿಸಲು ಒಟ್ಟು 75,021 ಕೋಟಿ ರೂ.ಗಳ ವೆಚ್ಚದ ‘ಪಿಎಂ-ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ’ಗೆ ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಈ ವರ್ಷ ಫೆಬ್ರವರಿ 13 ರಂದು ಯೋಜನೆಗೆ ಚಾಲನೆ ನೀಡಿದ್ದರು.
ಕೇಂದ್ರ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್, ಈ ಉಪಕ್ರಮವು ಸೌರ ಉತ್ಪಾದನೆ ಮತ್ತು ಪೂರೈಕೆ ಸರಪಳಿಗೆ ಉತ್ತೇಜನ ನೀಡುತ್ತದೆ ಮತ್ತು 17 ಲಕ್ಷ ಜನರಿಗೆ ನೇರ ಉದ್ಯೋಗವನ್ನು ನೀಡುತ್ತದೆ ಎಂದು ಹೇಳಿದರು.
“ಇದು ಸೌರ ಶಕ್ತಿ ಪರಿಸರ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಈ ಯೋಜನೆಯು ಉತ್ಪಾದನೆ, ಲಾಜಿಸ್ಟಿಕ್ಸ್, ಪೂರೈಕೆ ಸರಪಳಿ, ಮಾರಾಟ, ಸ್ಥಾಪನೆ ಮತ್ತು ಇತರ ಸೇವೆಗಳಲ್ಲಿ ಸುಮಾರು 17 ಲಕ್ಷ ನೇರ ಉದ್ಯೋಗಗಳನ್ನು ಸೃಷ್ಟಿಸುತ್ತದೆ ಎಂದು ಅಂದಾಜಿಸಲಾಗಿದೆ” ಎಂದು ಅವರು ಹೇಳಿದರು.
ಮನೆಯ ಸದಸ್ಯರು ರಾಷ್ಟ್ರೀಯ ಪೋರ್ಟಲ್ ಮೂಲಕ ಸಬ್ಸಿಡಿಗಾಗಿ ಅರ್ಜಿ ಸಲ್ಲಿಸಬಹುದು ಮತ್ತು ಮೇಲ್ಛಾವಣಿಯ ಸೋಲಾರ್ ಅಳವಡಿಸಲು ಸೂಕ್ತವಾದ ಮಾರಾಟಗಾರರನ್ನು ಆಯ್ಕೆ ಮಾಡಲು ಇದರಿಂದ ಸಾಧ್ಯವಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.