ಬೆಂಗಳೂರು: ಬೆಂಗಳೂರು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಮೂವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿರುವುದನ್ನು ಸ್ವಾಗತಿಸುತ್ತೇವೆ. ಆದರೆ ಆ ರೀತಿ ಘೋಷಣೆ ಕೂಗಿಲ್ಲ ಎಂದು ವಿತಂಡವಾದ ಮಾಡುವ ಕಾಂಗ್ರೆಸ್ ಮುಖಂಡರಿಗೆ ಇದೀಗ ತೀವ್ರ ಮುಖಭಂಗವಾಗಿದೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವಥನಾರಾಯಣ್ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ತಮಗಾಗಿರುವ ಅಪಮಾನಕ್ಕೆ ಪ್ರತೀಕಾರವಾಗಿ ಮತ್ತು ಹತಾಶೆಯಿಂದ ಮಂಡ್ಯದಲ್ಲಿ ಎರಡು ವರ್ಷದ ಕೆಳಗೆ ಬಿಲಾವರ್ ಭುಟ್ಟೊ ವಿರುದ್ದ ಬಿಜೆಪಿ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ರವಿಯವರು (ಆರಾಧ್ಯ ಅವರು ಆ ಪ್ರತಿಭಟನೆಯಲ್ಲಿ ಭಾಗವಹಿಸದೇ ಇದ್ದರು ಕೂಡ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು) ಪಾಕಿಸ್ಥಾನ ಮುರ್ದಾಬಾದ್ ಎಂದು ಕೂಗಿದ್ದರು. ಅವರಿಗೆ ಹಿಂದಿ ಭಾಷೆ ತಿಳಿಯದ ಕಾರಣ ಅವರು ಅಚಾತುರ್ಯದಿಂದ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದರು. ಆ ನಿಷ್ಠಾವಂತ ಕಾರ್ಯಕರ್ತರು ತಮ್ಮ ತಪ್ಪಿನ ಅರಿವಾಗಿ ಅವರು ಸ್ಪಷ್ಟೀಕರಣ ನೀಡಿದ್ದಲ್ಲದೆ ತಮ್ಮ ತಪ್ಪಿಗೆ ಕ್ಷಮೆಯನ್ನು ಕೋರಿದ್ದರು. ಅವರು ಘೋಷಣೆಯು ಉದ್ದೇಶಪೂರ್ವಕವಾಗಿ ಕೂಗಿದ್ದಲ್ಲಾ ಎಂದು ತನಿಖೆಯ ನಂತರ ತಿಳಿದ ಮೇಲೆ ಪೆÇಲೀಸರು ಅವರಿಗೆ ಎಚ್ಚರಿಕೆ ನೀಡಿ ಕಳುಹಿಸಿದ್ದರು.
ಆಗಿರುವ ಘಟನೆಗಳನ್ನು ವಿಷಯಾಂತರ ಗೊಳಿಸುವುದು ಮತ್ತು ಸೇಡಿನ ಭಾವನೆಯಿಂದ ಅಮಾಯಕ ಕಾರ್ಯಕರ್ತರನ್ನು ಬಂಧಿಸುವ ಉದ್ಧಟತನ ತೋರಿರುವದನ್ನು ನಾವು ಸಾರಾಸಗಟಾಗಿ ಖಂಡಿಸುತ್ತೇವೆ ಎಂದಿದ್ದಾರೆ.
ಮುಸ್ಲಿಂ ಯುವಕರನ್ನು ಬಂಧನ ಮಾಡಿದ ಕಾರಣಕ್ಕೆ ಮುಚ್ಚಿ ಹೋಗಿದ್ದ ಪ್ರಕರಣದಲ್ಲಿ ಹಿಂದೂ ಯುವಕರನ್ನು ಬಂಧಿಸಿರುವುದು ಇವರ ತುಷ್ಟೀಕರಣ ನೀತಿಯ ಭಾಗ ಇದಾಗಿದೆ. ಕಳೆದ ವಾರ ವಿಧಾನ ಸೌಧದಲ್ಲಿ “ಪಾಕಿಸ್ತಾನ ಜಿಂದಾಬಾದ್” ಎಂದು ಕೂಗಿದ್ದು ವಿಡೀಯೊದಲ್ಲಿ ಸ್ಪಷ್ಟವಾಗಿದ್ದರು ಆ ದ್ರೋಹಿಗಳನ್ನು ಬೆಂಬಲಿಸಿದ ಕಾಂಗ್ರೆಸ್ ಸಚಿವರ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ಅವರು ಹೇಳಿದ್ದಾರೆ.
ಅಪರಾಧ ಮಾಡುವುದು ಮತ್ತು ಅಪರಾಧಿಗಳನ್ನು ಬೆಂಬಲಿಸುವುದು ಅಷ್ಟು ಗಂಭೀರವಾದ ಅಪರಾಧವು ಆದ್ದರಿಂದ ಪೊಲೀಸರು ಆರೋಪಿಗಳನ್ನು ಬೆಂಬಲಿಸಿದ ಮೇಲೆಯೂ ಮೊಕದ್ದಮೆ ದಾಖಲು ಮಾಡಬೇಕು. ಸರ್ಕಾರ ಅಮಾಯಕ ಕಾರ್ಯಕರ್ತರ ಮೇಲೆ ಹೂಡಿರುವ ಸುಳ್ಳು ಮೊಕದ್ದಮೆಯನ್ನು ವಾಪಸ್ ಪಡೆಯಬೇಕು ಇಲ್ಲ ಅಪರಾಧಿಗಳ ಬೆಂಬಲಕ್ಕೆ ನಿಂತಿದ್ದ ಸರ್ಕಾರದ ಮಂತ್ರಿಗಳ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.