ಚಾಮರಾಜನಗರ: 102 ವರ್ಷದ ಅಜ್ಜಿಯೊಬ್ಬರು ಜನರಿಗೆ ಒಳಿತಾಗಲಿ, ಮಳೆಯಾಗಲಿ, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂಬ ಆಶಯದೊಂದಿಗೆ ಚಾಮರಾಜನಗರದ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟವನ್ನು ಹತ್ತಿದ್ದಾರೆ.
ಅವರು ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟವನ್ನು ಹತ್ತಿ, ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅಧಿಕಾರಾವಧಿಗಾಗಿ ಪ್ರಾರ್ಥಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತುಮಕೂರು ಜಿಲ್ಲೆಯ ತಿಪಟೂರು ಪಟ್ಟಣದ ಪಾರ್ವತಮ್ಮ ಅವರು ಮಹದೇಶ್ವರ ದೇವರ ದರ್ಶನಕ್ಕಾಗಿ ತಲಾ ಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ 18 ಕಿ.ಮೀ ಪಾದಯಾತ್ರೆ ನಡೆಸಿದವರು.
ಯಾತ್ರೆಯ ವೇಳೆ ಸಹ ಯಾಥ್ರಿಕರೊಂದಿಗೆ ಮಾತನಾಡಿದ ಅವರು, “ಪ್ರಧಾನಿ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು” ಎಂದಿದ್ದಾರೆ. ಪ್ರಧಾನಿ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಏನಾಗುತ್ತದೆ ಎಂಬ ಪ್ರಶ್ನೆಗೆ ಪಾರ್ವತಮ್ಮ ಅವರು, ದೇಶಕ್ಕೆ ಒಳ್ಳೆಯದಾಗಲಿದೆ ಎಂದಿದ್ದಾರೆ.
ಮಳೆಗಾಗಿ ಪ್ರಾರ್ಥಿಸಲು ಪಾದಯಾತ್ರೆ ಕೈಗೊಳ್ಳುತ್ತಿರುವುದಾಗಿಯೂ ಮಹಿಳೆ ತಿಳಿಸಿದ್ದಾರೆ. ಮಳೆ ಇಲ್ಲದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆ, ಬೆಳೆ ಇಲ್ಲದೆ ರೈತರು ಜೀವನ ನಡೆಸುವುದು ಹೇಗೆ? ಜಾನುವಾರುಗಳು ನೀರಿಗಾಗಿ ಪರಿತಪಿಸುತ್ತಿವೆ. ಕಾಡಿನಲ್ಲಿ ಪ್ರಾಣಿಗಳಿಗೆ ನೀರಿಲ್ಲ. ಎಲ್ಲರೂ ಚೆನ್ನಾಗಿರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ವೀಡಿಯೊದಲ್ಲಿ, ಯಾತ್ರಿಕರು ಪಾರ್ವತಮ್ಮರ ಅವರ ಮಾತಿಗೆ ಚಪ್ಪಾಳೆ ಮತ್ತು ಶಿಳ್ಳೆ ಹೊಡೆಯುವುದನ್ನು ಕಾಣಬಹುದು.
ಮಲೆ ಮಹದೇಶ್ವರ ಬೆಟ್ಟವು ಕರ್ನಾಟಕದ ಪ್ರಸಿದ್ಧ ಹಿಂದೂ ಯಾತ್ರಾ ಕೇಂದ್ರವಾಗಿದೆ. ಇಲ್ಲಿಗೆ ರಾಜ್ಯ ಮತ್ತು ತಮಿಳುನಾಡು, ಕೇರಳದಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.