ನವದೆಹಲಿ: ಸಮಾಜಸೇವೆಯಲ್ಲಿ ತೊಡಗುವ ಮೂಲಕ ಮನೆ ಮಾತಾಗಿರುವ ಇನ್ಫೋಸಿಸ್ ಫೌಂಡೇಶನ್ನ ಮಾಜಿ ಮುಖ್ಯಸ್ಥೆ ಸುಧಾಮೂರ್ತಿಯವರನ್ನು ರಾಜ್ಯಸಭೆಗೆ ನಾಮನಿರ್ದೇಶನಗೊಳಿಸಲಾಗಿದೆ. ಈ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿಯವರು ಎಕ್ಸ್ ಪೋಸ್ಟ್ ಮಾಡಿ ಮಾಹಿತಿ ನೀಡಿದ್ದಾರೆ.
ಇಂದು ಎಕ್ಸ್ ಪೋಸ್ಟ್ ಮಾಡಿರುವ ಮೋದಿ, “ಭಾರತದ ರಾಷ್ಟ್ರಪತಿಗಳು ಶ್ರೀಮತಿ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಸಂತೋಷ ತಂದಿದೆ. ಸಮಾಜಸೇವೆ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಅವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ‘ನಾರಿ ಶಕ್ತಿ’ಗೆ ಪ್ರಬಲವಾದ ಸಾಕ್ಷಿಯಾಗಿದೆ, ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಉದಾಹರಿಸುತ್ತದೆ. ಅವರಿಗೆ ಫಲಪ್ರದ ಸಂಸದೀಯ ಅಧಿಕಾರಾವಧಿಯನ್ನು ಹಾರೈಸುತ್ತೇನೆ” ಎಂದಿದ್ದಾರೆ.
ಆಗಸ್ಟ್ 19, 1950 ರಂದು ಜನಿಸಿದ ಸುಧಾ ಮೂರ್ತಿ ಅವರು ಹೆಸರಾಂತ ಭಾರತೀಯ ಶಿಕ್ಷಣತಜ್ಞೆ, ಲೇಖಕಿ, ಇನ್ಫೋಸಿಸ್ ಫೌಂಡೇಶನ್ನ ಮಾಜಿ ಅಧ್ಯಕ್ಷೆ ಮತ್ತು ಲೋಕೋಪಕಾರಿ. 2006 ರಲ್ಲಿ, ಅವರಿಗೆ ಭಾರತ ಸರ್ಕಾರದಿಂದ ಸಾಮಾಜಿಕ ಕಾರ್ಯಗಳಿಗಾಗಿ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಯಿತು. ನಂತರ 2023 ರಲ್ಲಿ, ಅವರು ಭಾರತದಲ್ಲಿ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಭೂಷಣ ಪಡೆದರು .
I am delighted that the President of India has nominated @SmtSudhaMurty Ji to the Rajya Sabha. Sudha Ji's contributions to diverse fields including social work, philanthropy and education have been immense and inspiring. Her presence in the Rajya Sabha is a powerful testament to… pic.twitter.com/lL2b0nVZ8F
— Narendra Modi (@narendramodi) March 8, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.