ಬೆಂಗಳೂರು: ಅಂತರರಾಷ್ಟ್ರೀಯ ಮಹಿಳಾ ದಿನದಂದೇ ರಾಜ್ಯದ ಶ್ರೇಷ್ಠ ಸಾಧಕಿ ಶ್ರೀಮತಿ ಸುಧಾ ಮೂರ್ತಿ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದ ಕೇಂದ್ರ ಸರಕಾರದ ಕ್ರಮ ಶ್ಲಾಘನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
ಈ ಕ್ರಮಕ್ಕಾಗಿ ಪ್ರಧಾನಿ ನರೇಂದ್ರ ಮೋದಿಜೀ ಅವರಿಗೆ ಧನ್ಯವಾದ ಸಮರ್ಪಿಸಿದ್ದಾರೆ ಹಾಗೂ ಸುಧಾಮೂರ್ತಿ ಅವರನ್ನು ಅಭಿನಂದಿಸಿದ್ದಾರೆ.
ಮೂಲತಃ ಧಾರವಾಡದವರಾದ ಸುಧಾ ಮೂರ್ತಿ ಅವರು ಸಮಾಜಸೇವೆಯಲ್ಲಿ ಸದಾ ತಮ್ಮನ್ನು ತೊಡಗಿಸಿಕೊಂಡವರು. ಇನ್ಫೋಸಿಸ್ ಫೌಂಡೇಷನ್ನ ಹಿನ್ನೆಲೆ ಇದ್ದರೂ ಸದಾ ಸರಳತೆ ಮೆರೆದವರು. ಅನಾಥ ಮಕ್ಕಳಿಗೆ ನೆರವು, ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಕಾರ ನೀಡಿದ ಅವರು, ಮಹಿಳಾ ಶಿಕ್ಷಣಕ್ಕೆ, ಸ್ವಾವಲಂಬಿತನಕ್ಕೆ ಹಾಗೂ ಮಹಿಳಾ ಸಂಘಟನೆಗಳ ಅಭಿವೃದ್ಧಿಗೆ ನೆರವು ನೀಡಿದ್ದಾರೆ. ‘ನಾರಿ ಶಕ್ತಿ’ಯನ್ನು ಗುರುತಿಸುವ ನಿಟ್ಟಿನಲ್ಲಿ ಇದೊಂದು ಮಹತ್ವದ ಕ್ರಮ ಎಂದು ಮೆಚ್ಚುಗೆ ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.