ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ಪ್ರದಾನಿಸಿದ ನ್ಯಾಷನಲ್ ಕ್ರಿಯೇಟರ್ಸ್ ಪ್ರಶಸ್ತಿಯನ್ನು ಸ್ವೀಕರಿಸಿದವರಲ್ಲಿ ಅಯ್ಯೋ ಶ್ರದ್ಧಾ ಖ್ಯಾತಿಯ ಕನ್ನಡತಿ ಶ್ರದ್ಧಾ ಜೈನ್ ಅವರು ಕೂಡ ಸೇರಿದ್ದಾರೆ.
ಶ್ರದ್ಧಾ ಜೈನ್ ಅವರಿಗೆ ಅತ್ಯಂತ ಸೃಜನಶೀಲ ರಚನೆಗಾರ್ತಿ (ಮಹಿಳೆ) ಪ್ರಶಸ್ತಿಯನ್ನು ನೀಡಲಾಯಿತು.
ಬೆಂಗಳೂರಿನಲ್ಲಿ ನೆಲೆಸಿರುವ ಶ್ರದ್ಧಾ ಜೈನ್ ಸಾಮಾಜಿಕ ಜಾಲತಾಣದಲ್ಲಿ ‘ಅಯ್ಯೋ ಶ್ರದ್ಧಾ’ ಎಂದೇ ಫೇಮಸ್. ಅಯ್ಯೋ ಶ್ರದ್ಧಾ ಅವರ ಲಿಂಕ್ಡ್ಇನ್ ಪ್ರೊಫೈಲ್ ಪ್ರಕಾರ, ಅವರು ಲಿಂಕ್ಡ್ಇನ್ನಲ್ಲಿ 83,000 ಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ ಮತ್ತು ಇನ್ಸ್ಟಾಗ್ರಾಮ್ನಲ್ಲಿ 6.88 ಲಕ್ಷ ಅನುಯಾಯಿಗಳನ್ನು ಹೊಂದಿದ್ದಾರೆ. ಅಯ್ಯೋ ಶ್ರದ್ಧಾ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸಕ್ರಿಯರಾಗಿದ್ದಾರೆ ಮತ್ತು ಅವರ ಇನ್ಸ್ಟಾಗ್ರಾಂ ಖಾತೆಯಲ್ಲಿ ವೀಡಿಯೊಗಳನ್ನು ಪೋಸ್ಟ್ ಮಾಡುತ್ತಲೇ ಇರುತ್ತಾರೆ. ಕಳೆದ ವರ್ಷ ಪ್ರಧಾನಿ ಮೋದಿಯನ್ನೂ ಕೂಡ ಇವರು ಭೇಟಿಯಾಗಿದ್ದರು.
ಸಮಾರಂಭದಲ್ಲಿ, ಪ್ರಧಾನಿ ಮೋದಿಯವರು ಪ್ರೇರಕ ಭಾಷಣಕಾರ ಜಯ ಕಿಶೋರಿ, ಅಮೇರಿಕನ್ ಯೂಟ್ಯೂಬರ್ ಡ್ರೂ ಹಿಕ್ಸ್ ಮತ್ತು ಇತರರು ಸೇರಿದಂತೆ ಹಲವಾರು ಸೋಷಿಯಲ್ ಮೀಡಿಯಾಗಳಲ್ಲಿ ಜನಪ್ರಿಯರಾಗಿರುವವರಿಗೆ ಪ್ರಶಸ್ತಿಯನ್ನು ಪ್ರದಾನಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.