ನವದೆಹಲಿ: 2025-26ರ ವೇಳೆಗೆ ದೇಶಾದ್ಯಂತ 740 ಏಕಲವ್ಯ ಮಾದರಿ ವಸತಿ ಶಾಲೆಗಳನ್ನು ಕಾರ್ಯಗತಗೊಳಿಸಲಾಗುವುದು ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಹೇಳಿದ್ದಾರೆ.
740 ಏಕಲವ್ಯ ಮಾದರಿ ವಸತಿ ಶಾಲೆಗಳ ಪೈಕಿ 401 ಏಕಲವ್ಯ ಮಾದರಿ ವಸತಿ ಶಾಲೆಗಳನ್ನು ಆರಂಭಿಸಲಾಗಿದೆ ಎಂದು ಇಂದು ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಂಡಾ ಹೇಳಿದರು.
ಈ ಶಾಲೆಗಳಿಗೆ 10,000 ಶಿಕ್ಷಕರನ್ನು ನೇಮಕ ಮಾಡಲಾಗಿದ್ದು, ಶೀಘ್ರದಲ್ಲೇ 10,000 ಶಿಕ್ಷಕರನ್ನು ನೇಮಕ ಮಾಡಲಾಗುವುದು ಎಂದು ಹೇಳಿದರು.
ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಜೊತೆಗೆ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಕೌಶಲ್ಯ ತರಬೇತಿ ನೀಡಲು ಸಹಕರಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.