ನವದೆಹಲಿ: ಉತ್ತರಾಖಂಡದಲ್ಲಿರುವ ಪವಿತ್ರ ಕೇದಾರನಾಥ ದೇವಾಲಯದ ಬಾಗಿಲು ಮೇ 10 ರಂದು ಬೆಳಗ್ಗೆ 7 ಗಂಟೆಗೆ ಭಕ್ತರಿಗಾಗಿ ತೆರೆಯಲಿದೆ ಎಂದು ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ(BKTC) ಮಹಾಶಿವರಾತ್ರಿಯ ಸಂದರ್ಭವಾದ ಇಂದು ಪ್ರಕಟಿಸಿದೆ.
ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ ಅಧ್ಯಕ್ಷ ಅಜೇಂದ್ರ ಅಜಯ್ ಅವರು ಈ ಬಗ್ಗೆ ಘೋಷಣೆ ಮಾಡಿದ್ದು, ಕಳೆದ ಯಾತ್ರೆಯ ಋತುವಿನಲ್ಲಿ ಕೇದಾರನಾಥ ಧಾಮಕ್ಕೆ ದಾಖಲೆಯ ಸಂಖ್ಯೆಯ ಭಕ್ತರು ಭೇಟಿ ನೀಡಿದ್ದು, ಈ ವರ್ಷ ಯಾತ್ರಿಕರ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆ ಎಂದರು.
ಪ್ರತಿ ವರ್ಷ ಲಕ್ಷಗಟ್ಟಲೆ ಜನ ಭೇಟಿ ನೀಡುವ ಹಿಮಾಲಯದ ಈ ದೇವಾಲಯದ ದ್ವಾರಗಳನ್ನು ಚಳಿಗಾಲದಲ್ಲಿ ಹಿಮದ ಕಾರಣದಿಂದಾಗಿ ಮುಚ್ಚಲಾಗುತ್ತದೆ.
ರುದ್ರಪ್ರಯಾಗದಲ್ಲಿರುವ ಕೇದಾರನಾಥ ಧಾಮದ ಬಾಗಿಲುಗಳನ್ನು ವರ್ಷದಲ್ಲಿ 6 ತಿಂಗಳು ಮುಚ್ಚಲಾಗುತ್ತದೆ. ಇನ್ನು, 6 ತಿಂಗಳ ಕಾಲ ಉಖಿಮಠ, ಪ್ರತಿ ವರ್ಷ ಮಹಾಶಿವರಾತ್ರಿಯ ದಿನದಂದು ಬಾಗಿಲು ತೆರೆಯುವ ದಿನಾಂಕವನ್ನು ಪ್ರಕಟಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.