ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ್ 15 ರಿಂದ 19 ರವರೆಗೆ ದಕ್ಷಿಣದ 5 ರಾಜ್ಯಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಕರ್ನಾಟಕದ 12 ಲೋಕಸಭಾ ಕ್ಷೇತ್ರಗಳಲ್ಲಿ ಅವರು ಪ್ರವಾಸ ನಡೆಸಲಿದ್ದಾರೆ.
ಮಾ.15 ರಂದು ಕೋಲಾರಕ್ಕೆ ಭೇಟಿ ನೀಡಲಿದ್ದು ತುಮಕೂರು, ಚಿಕ್ಕಬಳ್ಳಾಪುರ ಕ್ಷೇತ್ರಗಳ ಮೇಲೆ ಫೋಕಸ್ ಮಾಡಲಿದ್ದಾರೆ. ಮಾ.17 ರಂದು ಶಿವಮೊಗ್ಗ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳ ಬಗ್ಗೆ ವಿಶೇಷ ಗಮನ ನೀಡಲಿದ್ದಾರೆ. ಮಾ.18 ರಂದು ಬೀದರ್ ಹಾಗೂ ಕಲಬುರಗಿ ಮತ್ತು ಮಾ.19 ರಂದು ಧಾರವಾಡಕ್ಕೆ ಭೇಟಿ ನೀಡಲಿದ್ದು, ಬೆಳಗಾವಿ, ಹಾವೇರಿ ಜಿಲ್ಲೆಗಳ ಮೇಲೆ ಫೋಕಸ್ ಮಾಡಲಿದ್ದಾರೆ. ಈ ವೇಳೆ ಕೆಲವು ಕಾಮಗಾರಿಗಳಿಗೆ ಚಾಲನೆ ನೀಡಲಿದ್ದು, ಕೆಲವು ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಪ್ರಕಟ ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಎರಡನೇ ಹಂತದ ದಕ್ಷಿಣ ಭಾರತ ಪ್ರವಾಸ ಇದಾಗಿದೆ. ಈ ಬಾರಿ ಕರ್ನಾಟಕ ಸೇರಿದಂತೆ ದಕ್ಷಿಣದ ಪಂಚ ರಾಜ್ಯಗಳಲ್ಲಿ ಪ್ರಧಾನಿ ಪ್ರವಾಸ ಕೈಗೊಳ್ಳಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.