ನವದೆಹಲಿ: ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಇಂದು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ತನ್ನ ವರದಿಯನ್ನು ಸಲ್ಲಿಸಿದೆ.
ಇಂದು ಬೆಳಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವರದಿ ಸಲ್ಲಿಸಲಾಯಿತು ಎಂದು ಮೂಲಗಳು ತಿಳಿಸಿವೆ.
‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತ ಪರಿಕಲ್ಪನೆಯು ದೇಶಾದ್ಯಂತ ಏಕಕಾಲದಲ್ಲಿ ಮತದಾನವನ್ನು ನಡೆಸುವುದನ್ನು ಸೂಚಿಸುತ್ತದೆ. ಲೋಕಸಭೆ ಹಾಗೂ ಎಲ್ಲ ರಾಜ್ಯಗಳ ವಿಧಾನಸಭೆಗಳಿಗೂ ಏಕಕಾಲದಲ್ಲಿ ಚುನಾವಣೆ ನಡೆಸುವ ಪ್ರಸ್ತಾವನೆ ಇದೆ.
ಭಾರತದಲ್ಲಿ, ಸಂಸತ್ತಿನ ಸದಸ್ಯರನ್ನು ಆಯ್ಕೆ ಮಾಡಲು ಸಾರ್ವತ್ರಿಕ ಚುನಾವಣೆಗಳು ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳು ಪ್ರಸ್ತುತ ಸರ್ಕಾರದ ಅವಧಿಯು ಅಂತ್ಯಗೊಂಡಾಗ ಅಥವಾ ಕೆಲವು ಕಾರಣಗಳಿಂದ ಅದು ವಿಸರ್ಜನೆಯಾದಾಗ ಪ್ರತ್ಯೇಕವಾಗಿ ನಡೆಯುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರು ಬಹಳ ಹಿಂದಿನಿಂದಲೂ ಒಂದು ರಾಷ್ಟ್ರ, ಒಂದು ಚುನಾವಣೆಯ ಕಲ್ಪನೆಯನ್ನು ಪ್ರತಿಪಾದಿಸುತ್ತಿದ್ದಾರೆ.
ಈ ಬಗ್ಗೆ ಪರಿಶೀಲಿಸಲು ಕೋವಿಂದ್ ನೇತೃತ್ವದಲ್ಲಿ ಗೃಹ ಸಚಿವ ಅಮಿತ್ ಶಾ, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, ಮಾಜಿ ಹಣಕಾಸು ಆಯೋಗದ ಅಧ್ಯಕ್ಷ ಎನ್ ಕೆ ಸಿಂಗ್, ಮಾಜಿ ಲೋಕಸಭೆಯ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಮತ್ತು ಹಿರಿಯ ವಕೀಲ ಹರೀಶ್ ಸಾಳ್ವೆ ಸದಸ್ಯರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.