ನವದೆಹಲಿ: ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಗೆ ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದಾರೆ. ಈ ಬಗ್ಗೆ ಉತ್ತರಾಖಂಡ ಸರ್ಕಾರ ಮಾಹಿತಿಯನ್ನು ನೀಡಿದೆ.
ಈ ಬಗ್ಗೆ ಅಧಿಸೂಚನೆಯನ್ನೂ ರಾಜ್ಯ ಸರ್ಕಾರ ಹೊರಡಿಸಿದೆ. ರಾಷ್ಟ್ರಪತಿ ಅಂಕಿತದ ಬಳಿಕ ಉತ್ತರಾಖಂಡವು ಯುಸಿಸಿ ಕಾನೂನನ್ನು ಜಾರಿಗೆ ತಂದ ದೇಶದ ಮೊದಲ ರಾಜ್ಯವಾಗಿದೆ.
ಬುಧವಾರ ಮಸೂದೆಯನ್ನು ಅಂಗೀಕರಿಸಿದ್ದಕ್ಕಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಿಎಂ ಧಾಮಿ ಕೃತಜ್ಞತೆ ಸಲ್ಲಿಸಿದರು. ಶೀಘ್ರದಲ್ಲೇ ರಾಜ್ಯದಲ್ಲಿ ಈ ಕಾನೂನು ಪರಿಣಾಮಕಾರಿಯಾಗಿ ಜಾರಿಯಾಗಲಿದೆ ಎಂದರು.
ಯುಸಿಸಿ ಕಾನೂನನ್ನು ತರುವ ಮಸೂದೆಯನ್ನು ಫೆಬ್ರವರಿ 6 ರಂದು ರಾಜ್ಯ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. ಈ ಮಸೂದೆಯು ಸಂವಿಧಾನದ 44 ನೇ ವಿಧಿಯ ಅಡಿಯಲ್ಲಿರುವುದರಿಂದ, ಈ ಮಸೂದೆಯನ್ನು ಕಾನೂನಾಗಿ ಜಾರಿಗೆ ತರಲು ರಾಷ್ಟ್ರಪತಿಗಳ ಅನುಮೋದನೆ ಅಗತ್ಯವಾಗಿತ್ತು. ಸರ್ಕಾರವು ಈ ಮಸೂದೆಯನ್ನು ರಾಜ್ಯಪಾಲರಿಗೆ ಕಳುಹಿಸಿತು ಮತ್ತು ರಾಜ್ಯಪಾಲರು ಸಂವಿಧಾನದ ನಿಬಂಧನೆಗಳ ಕಾರಣದಿಂದಾಗಿ ರಾಷ್ಟ್ರಪತಿಗಳ ಅನುಮೋದನೆಗೆ ಕಳುಹಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.