: ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಲೀಟರ್ಗೆ 2 ರೂಪಾಯಿ ಇಳಿಸುವ ಮಹತ್ವದ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ.
ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಕ್ಸ್ನಲ್ಲಿನ ಪೋಸ್ಟ್ನಲ್ಲಿ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಿರುವುದಾಗಿ ತಿಳಿಸಿವೆ. ಹೊಸ ಬೆಲೆಗಳು ಮಾರ್ಚ್ 15, 2024 ರಿಂದ ಬೆಳಿಗ್ಗೆ 6 ರಿಂದ ಜಾರಿಗೆ ಬರುತ್ತವೆ ಎಂದು ತಿಳಿಸಿದ್ದಾರೆ.
ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಎಕ್ಸ್ನಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ಗೆ 2 ರೂಪಾಯಿ ಇಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಕೋಟ್ಯಂತರ ಭಾರತೀಯರ ತಮ್ಮ ಪರಿವಾರದ ಕಲ್ಯಾಣ ಮತ್ತು ಅನುಕೂಲವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಯಾವಾಗಲೂ ಅದು ಅವರ ಗುರಿಯಾಗಿದೆ” ಎಂದಿದ್ದಾರೆ.
ಕಡಿಮೆಯಾದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ನಾಗರಿಕರಿಗೆ ಹೆಚ್ಚು ಆದಾಯ, ಪ್ರವಾಸೋದ್ಯಮ ಮತ್ತು ಪ್ರಯಾಣ ಉದ್ಯಮಗಳಿಗೆ ಉತ್ತೇಜನ ಮತ್ತು ಹಣದುಬ್ಬರ ನಿಯಂತ್ರಣದ ಮೂಲಕ ಪ್ರಯೋಜನವನ್ನು ನೀಡುತ್ತದೆ ಎಂದು ಸಚಿವಾಲಯ ಹೇಳಿದೆ.
Oil Marketing Companies (OMCs) have informed that they have revised Petrol and Diesel Prices across the country. New prices would be effective from 15th March 2024, 06:00 AM.
Reduction in petrol and diesel prices will boost consumer spending and reduce operating costs for over… pic.twitter.com/FlUSdtg2Vi
— Ministry of Petroleum and Natural Gas #MoPNG (@PetroleumMin) March 14, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.