ನವದೆಹಲಿ: 2024ರ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಭಾರತೀಯ ಚುನಾವಣಾ ಆಯೋಗ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ದಿನಾಂಕ ಘೋಷಿಸಿದೆ. ಕರ್ನಾಟಕ ಎರಡು ಹಂತದಲ್ಲಿ ಚುನಾವಣೆ ಎದುರಿಸಲಿದೆ. ಎಪ್ರಿಲ್ 26 ಮತ್ತು ಮೇ 7ರಂದು ಚುನಾವಣೆ ನಡೆಯಲಿದೆ.
ಲೋಕಸಭಾ ಚುನಾವಣೆ ಒಟ್ಟು 7 ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತ ಎಪ್ರಿಲ್ 19 ರಿಂದ ಆರಂಭವಾಗಲಿದೆ.
ಎಪ್ರಿಲ್ 19 ರಂದು ಮೊದಲ ಹಂತದಲ್ಲಿ 21 ರಾಜ್ಯಗಳ 102 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ
ಎಪ್ರಿಲ್ 26 ರಂದು ಎರಡನೇ ಹಂತದಲ್ಲಿ 13 ರಾಜ್ಯಗಳ 89 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ಮೇ 7ರಂದು ಮೂರನೇ ಹಂತದಲ್ಲಿ 21 ರಾಜ್ಯಗಳ 102 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಮೇ 13ರಂದು ನಾಲ್ಕನೇ ಹಂತದಲ್ಲಿ 12 ರಾಜ್ಯಗಳ 94 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ
ಮೇ 20ರಂದು ಐದನೇ ಹಂತದಲ್ಲಿ 10 ರಾಜ್ಯಗಳ 96 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ
ಮೇ 25ರಂದು ಆರನೇ ಹಂತದಲ್ಲಿ ಎಂಟು ರಾಜ್ಯಗಳ 49 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ
ಜೂನ್ 1ರಂದು ಏಳನೇ ಹಂತದಲ್ಲಿ ಏಳು ರಾಜ್ಯಗಳ 57 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ
ಜೂನ್ 4ಕ್ಕೆ ಮತ ಎಣಿಕೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.