ಬೆಂಗಳೂರು: ಭಾನುವಾರ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಅಜಾನ್ ಸಮಯದಲ್ಲಿ ಸಂಗೀತ ನುಡಿಸಿದರು ಎಂದು ಆರೋಪಿಸಿ ಯುವಕರ ಗುಂಪೊಂದು ಬೆಂಗಳೂರಿನಲ್ಲಿ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ನಡೆಸಿದೆ. ವಾದ ವಿವಾದದ ಸಿಸಿಟಿವಿ ದೃಶ್ಯಾವಳಿ ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
ಬೆಂಗಳೂರಿನ ಬನಶಂಕರಿ ಬಡಾವಣೆಯ ಸಿದ್ದಣ್ಣ ಲೇಔಟ್ನಲ್ಲಿ ಈ ಮಾರಾಮಾರಿ ನಡೆದಿದೆ. ಈ ದೃಶ್ಯಾವಳಿಯಲ್ಲಿ ಮುಸ್ಲಿಂ ಯುವಕರ ಗುಂಪು ಅಂಗಡಿಯವನ ಮೇಲೆ ದೌರ್ಜನ್ಯ ನಡೆಸುತ್ತಿರುವುದು ಕಂಡುಬಂದಿದೆ. ಸ್ಥಳದಲ್ಲಿ ತೀವ್ರ ವಾಗ್ವಾದ ನಡೆದಿದೆ. ಯುವಕನೊಬ್ಬ ಅಂಗಡಿಯವನ ಕೊರಳಪಟ್ಟಿ ಹಿಡಿದು ಹಲ್ಲೆ ಮಾಡಿದ್ದಾನೆ. ಅಂಗಡಿಯಿಂದ ಹೊರಗೆಳೆದು ಹಲ್ಲೆ ನಡೆಸಲಾಗಿದೆ.
ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾದ ಖಂಡನೆಗೆ ಒಳಗಾಗಿದ್ದು, ಜನರು ಕರ್ನಾಟಕದ ಕಾನೂನು-ಸುವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಘಟನೆ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.
#Bengaluru
Muslim boys trash shopkeeper for playing loud music during AzaanSo Azaan can be loud 5 times a day that's ok? The irony!
Hope this Ramzan better sense prevails 🙏🏻
Incident reported near Siddanna Layout, FIR lodged in Halasuru gate police station! pic.twitter.com/MEuoImIJxV
— Nabila Jamal (@nabilajamal_) March 18, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.