ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ಪ್ರಶ್ನಿಸಿ ಸಲ್ಲಿಸಲಾದ ಸುಮಾರು 237 ಅರ್ಜಿಗಳ ವಿಚಾರಣೆ ಸುಪ್ರೀಂಕೋರ್ಟ್ ನಡೆಸುತ್ತಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸುತ್ತಿದೆ.
ನ್ಯಾಯಪೀಠ ಸಿಎಎಗೆ ತಡೆ ನೀಡಲು ನಿರಾಕರಿಸಿದ್ದು, ಅರ್ಜಿಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ಕೇಂದ್ರಕ್ಕೆ ಮೂರು ವಾರಗಳ ಕಾಲಾವಕಾಶ ನೀಡಿದೆ.
ಅರ್ಜಿದಾರರಲ್ಲಿ ಕೇರಳ ಮೂಲದ ರಾಜಕೀಯ ಪಕ್ಷವಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ಮತ್ತು ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್ಐ), ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್, ತೃಣಮೂಲ ನಾಯಕ ಮಹುವಾ ಮೊಯಿತ್ರಾ ಮತ್ತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೇರಿದ್ದಾರೆ.
ಕೇಂದ್ರವು ಸಿಎಎ ನಿಯಮಗಳನ್ನು ಸೂಚಿಸಿದ ಮರುದಿನ, ಎರಡು ಸಂಸ್ಥೆಗಳು ಕಾನೂನಿನ ಅನುಷ್ಠಾನಕ್ಕೆ ವಿರಾಮ ಕೋರಿ ಸುಪ್ರೀಂಕೋರ್ಟ್ಗೆ ಮೊರೆ ಹೋಗಿದ್ದವು. ಮುಸ್ಲಿಂ ಸಮುದಾಯದ ವಿರುದ್ಧ ಸಿಎಎ “ತಾರತಮ್ಯ” ಹೊಂದಿದೆ ಎಂದು ಅರ್ಜಿದಾರರಯ ಆರೋಪಿಸಿದ್ದಾರೆ.
2019 ರಲ್ಲಿ, ಪೌರತ್ವ ತಿದ್ದುಪಡಿ ಮಸೂದೆ ಸಂಸತ್ತಿನಲ್ಲಿ ಅಂಗೀಕಾರವಾದಾಗ, ಅದರ ವಿರುದ್ಧ ಅನೇಕ ಅರ್ಜಿಗಳು ಸಲ್ಲಿಕೆಯಾಗಿದ್ದವು. ಆದರೆ ನಿಯಮಾವಳಿಗಳನ್ನು ತಿಳಿಸದ ಕಾರಣ ನ್ಯಾಯಾಲಯ ಅದರ ಅನುಷ್ಠಾನಕ್ಕೆ ವಿರಾಮ ನೀಡಿರಲಿಲ್ಲ. ಶುಕ್ರವಾರ, ಹಿರಿಯ ವಕೀಲ ಕಪಿಲ್ ಸಿಬಲ್ ಅವರು ನಿಯಮಗಳನ್ನು ತಿಳಿಸದ ಕಾರಣ ವಿರಾಮ ನೀಡುವ ಪ್ರಶ್ನೆಯೇ ಇಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಆಗ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಚುನಾವಣೆಗೂ ಮುನ್ನವೇ ನಿಯಮಾವಳಿಗಳನ್ನು ಅಧಿಸೂಚನೆ ಹೊರಡಿಸಿರುವುದು ಅಪ್ರಸ್ತುತ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.