ನವದೆಹಲಿ: 18ನೇ ಶತಮಾನದ ವೇದ ಕಾಲದಿಂದ ಭಾರತ ವಿಜ್ಞಾನ ಕ್ಷೇತ್ರದಲ್ಲಿ ಮಾಡಿದ ಸಾಧನೆಗಳನ್ನು ಸಂಗ್ರಹಿಸಲು ಇಂಡಿಯನ್ ಕೌನ್ಸಿಲ್ ಆಫ್ ಹಿಸ್ಟೋರಿಕಲ್ ರಿಸರ್ಚ್ ಮುಂದಾಗಿದೆ.
ಮಾನವ ಸಂಪನ್ಮೂಲ ಸಚಿವಾಲಯದ ಅಧೀನದಲ್ಲಿರುವ ಈ ಸಂಸ್ಥೆ ಈಗಾಗಲೇ ಪುರಾತನ ಕಾಲದಿಂದ ಹಿಡಿದು ಆಧುನಿಕ ಕಾಲದವರೆಗಿನ ಭಾರತದ ಪರಿಸರ ವಿಜ್ಞಾನದ ಇತಿಹಾಸವನ್ನು ಸಂಗ್ರಹಿಸುವ ನಿರ್ಧಾರ ಕೈಗೊಂಡಿದೆ.
ವೇದ, ಪುರಾಣ, ಧರ್ಮಶಾಸ್ತ್ರ, ಅರ್ಥಶಾಸ್ತ್ರ, ವೇದಾಂಗ ಜ್ಯೋತಿಷ್ಯ, ರಸಶಾಸ್ತ್ರ ಮತ್ತು ವಾಸ್ತು ಶಾಸ್ತ್ರವನ್ನು ಅಧ್ಯಯನ ಮಾಡಲು ಇತಿಹಾಸ ತಜ್ಞರನ್ನು ನೇಮಕ ಮಾಡುವ ನಿರ್ಧಾರ ಮಾಡಲಾಗಿದೆ. ಈ ಮೂಲಕ ಖಗೋಳ ಶಾಸ್ತ್ರ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ, ಆರ್ಯುವೇದ, ವಾಸ್ತುಶಿಲ್ಪ, ಸೌಂದರ್ಯ ಶಾಸ್ತ್ರ, ಇತರ ತಾಂತ್ರಿಕ ಮತ್ತು ವೈಜ್ಞಾನಿಕ ಅಧ್ಯಯನದಲ್ಲಿ ಭಾರತದ ಸಾಧನೆಯನ್ನು ಪತ್ತೆ ಮಾಡುವ ಉದ್ದೇಶವನ್ನು ಹೊಂದಲಾಗಿದೆ.
ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಭಾರತದ ಪುರಾತನ ಕಲೆಗಳ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದು, ಈ ಬಗ್ಗೆ ಅಧ್ಯಯನ ಕೈಗೊಳ್ಳಲು ಹೆಚ್ಚು ಉತ್ಸುಕತೆ ತೋರಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.