ಥಿಂಪು: ಭೂತಾನ್ ರಾಜಧಾನಿ ಥಿಂಪುವಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಭೂತಾನ್ ಪ್ರಧಾನಿ ತ್ಶೆರಿಂಗ್ ತೊಬ್ಗೇ ಅವರ ಸಮ್ಮುಖದಲ್ಲಿ ಭಾರತ ಮತ್ತು ಭೂತಾನ್ ನಡುವೆ ಹಲವು ಒಪ್ಪಂದಗಳ ದಾಖಲೆಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು. ಉಭಯ ರಾಷ್ಟ್ರಗಳ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಪರಸ್ಪರ ಆಸಕ್ತಿಯ ಹಲವಾರು ಒಪ್ಪಂದಗಳನ್ನು ವಿನಿಮಯ ಮಾಡಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ನರೇಂದ್ರ ಮೋದಿಯವರ ಭೂತಾನ್ ಭೇಟಿಯು ಅಭಿವೃದ್ಧಿ ಪಾಲುದಾರಿಕೆಗೆ ಒತ್ತು ನೀಡುವ ಮೂಲಕ ದ್ವಿಪಕ್ಷೀಯ ಸಂಬಂಧಕ್ಕೆ ಹೊಸ ಉತ್ತೇಜನವನ್ನು ನೀಡಲಿದೆ ಎಂದು ವಿಶ್ಲೇಷಿಸಲಾಗಿದೆ. ಭಾರತವು ಪ್ರಸ್ತುತ ಭೂತಾನ್ನ ಸಾಮರ್ಥ್ಯ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದೆ ಮತ್ತು ಜಲವಿದ್ಯುತ್, ಡಿಜಿಟಲೀಕರಣ, ಹಣಕಾಸು ಸೇರ್ಪಡೆ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ಹಲವಾರು ಯೋಜನೆಗಳಿಗೆ ಸಹಾಯ ಮಾಡುತ್ತಿದೆ.
ಭೂತಾನ್ ಅನ್ನು ಒಂದು ಸ್ಮಾರ್ಟ್, ಸಂಪರ್ಕಿತ ಮತ್ತು ಅಂತರ್ಗತ ಸಮಾಜವಾಗಲು ಇ-ಬಿಸಿನೆಸ್ ನ್ಯಾಷನಲ್ ಸಿಂಗಲ್ ವಿಂಡೋ, ಭೂತಾನ್ ಇಂಟಿಗ್ರೇಟೆಡ್ ಟ್ಯಾಕ್ಸೇಶನ್ ಸಿಸ್ಟಮ್, ಇಂಟಿಗ್ರೇಟೆಡ್ ಸಿಟಿಜನ್ ಸರ್ವಿಸಸ್ ಮತ್ತು ಡಿಜಿಟಲ್ ಸ್ಕೂಲ್ನಂತಹ ವಿವಿಧ ಡಿಜಿಟಲ್ ಕಾರ್ಯಕ್ರಮಗಳಿಗೆ ಭಾರತ ಬೆಂಬಲವನ್ನು ನೀಡುತ್ತಿದೆ.
ಭೂತಾನ್ಗೆ ಎರಡು ದಿನಗಳ ಪ್ರವಾಸದಲ್ಲಿರುವ ಪ್ರಧಾನಿ ಇಂದು ಬೆಳಗ್ಗೆ ಪಾರೊ ತಲುಪಿದರು. ಪಾರೋ ವಿಮಾನ ನಿಲ್ದಾಣದಲ್ಲಿ ಅಲ್ಲಿನ ಪ್ರಧಾನಿ ಟ್ಶೆರಿಂಗ್ ಟೋಬ್ಗೇ ಅವರನ್ನು ಪ್ರೀತಿಯಿಂದ ಬರಮಾಡಿಕೊಂಡರು ಮತ್ತು ವಿಧ್ಯುಕ್ತ ಸ್ವಾಗತವನ್ನು ನೀಡಿದರು.
ಭೇಟಿಯ ಸಮಯದಲ್ಲಿ, ಪ್ರಧಾನ ಮಂತ್ರಿಯವರು ಭೂತಾನ್ ರಾಜ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್ಚುಕ್ ಮತ್ತು ಭೂತಾನ್ನ ನಾಲ್ಕನೇ ರಾಜ ಜಿಗ್ಮೆ ಸಿಂಗ್ಯೆ ವಾಂಗ್ಚುಕ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.