ಥಿಂಪು: ಭೂತಾನ್ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಆರ್ಡರ್ ಆಫ್ ಡ್ರುಕ್ ಗ್ಯಾಲ್ಪೋ’ ಸ್ವೀಕರಿಸಿದ ಮೊದಲ ವಿದೇಶಿ ಸರ್ಕಾರದ ಮುಖ್ಯಸ್ಥರಾದ ಪ್ರಧಾನಿ ನರೇಂದ್ರ ಮೋದಿ ಅವರು ಆ ಗೌರವವನ್ನು 140 ಕೋಟಿ ಭಾರತೀಯರಿಗೆ ಅರ್ಪಿಸಿದ್ದಾರೆ.
ಶುಕ್ರವಾರ ಭೂತಾನ್ ರಾಜರಿಂದ ಪ್ರಧಾನಿ ಮೋದಿ ಪ್ರಶಸ್ತಿ ಸ್ವೀಕರಿಸಿದ ಪ್ರಧಾನಿ ಮೋದಿ, “ಈ ಗೌರವ ನನ್ನ ವೈಯಕ್ತಿಕ ಸಾಧನೆಯಲ್ಲ, ಇದು ಭಾರತ ಮತ್ತು 140 ಕೋಟಿ ಭಾರತೀಯರ ಗೌರವವಾಗಿದೆ. ನಾನು ಈ ಗೌರವವನ್ನು ಎಲ್ಲಾ ಭಾರತೀಯರ ಪರವಾಗಿ ವಿನಮ್ರವಾಗಿ ಸ್ವೀಕರಿಸುತ್ತೇನೆ. ಭೂತಾನ್ನ ಶ್ರೇಷ್ಠ ಭೂಮಿ ಮತ್ತು ಈ ಗೌರವಕ್ಕಾಗಿ ನನ್ನ ಹೃದಯದಿಂದ ಎಲ್ಲರಿಗೂ ಧನ್ಯವಾದಗಳು” ಎಂದಿದ್ದಾರೆ.
“ಇಂದು ನನ್ನ ಜೀವನದಲ್ಲಿ ಬಹಳ ದೊಡ್ಡ ದಿನವಾಗಿದೆ, ನನಗೆ ಭೂತಾನ್ನ ಅತ್ಯುನ್ನತ ನಾಗರಿಕ ಗೌರವವನ್ನು ನೀಡಲಾಗಿದೆ. ಪ್ರತಿಯೊಂದು ಪ್ರಶಸ್ತಿಯು ವಿಶೇಷವಾಗಿದೆ, ಆದರೆ ನೀವು ಬೇರೆ ದೇಶದಿಂದ ಪ್ರಶಸ್ತಿಯನ್ನು ಸ್ವೀಕರಿಸಿದಾಗ, ಇದು ಎರಡೂ ದೇಶಗಳು ಸರಿಯಾದ ಹಾದಿಯಲ್ಲಿ ಸಾಗುತ್ತಿವೆ ಎಂಬುದನ್ನು ತೋರಿಸುತ್ತದೆ ” ಎಂದಿದ್ದಾರೆ.
“ಪ್ರತಿಯೊಬ್ಬ ಭಾರತೀಯನ ಪರವಾಗಿ ನಾನು ಈ ಗೌರವವನ್ನು ಸ್ವೀಕರಿಸುತ್ತೇನೆ ಮತ್ತು ಇದಕ್ಕಾಗಿ ಧನ್ಯವಾದಗಳು” ಎಂದು ಭೂತಾನ್ಗೆ ಎರಡು ದಿನಗಳ ರಾಜ್ಯ ಪ್ರವಾಸಕ್ಕಾಗಿ ಇಂದು ಆಗಮಿಸಿದ ಪ್ರಧಾನಿ ಮೋದಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.