ನವದೆಹಲಿ: ಬಿಜೆಪಿ- 2024 ರ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ 5 ನೇ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದ್ದು, ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಾಲಿವುಡ್ ನಟಿ ಕಂಗನಾ ರನೌತ್ ಮತ್ತು ಉತ್ತರ ಪ್ರದೇಶದ ಮೀರತ್ನಿಂದ ಪ್ರಸಿದ್ಧ ಕಿರುತೆರೆ ನಟ ಅರುಣ್ ಗೋವಿಲ್ ಅವರನ್ನು ಕಣಕ್ಕಿಳಿಸಿದೆ.
ಲೋಕಸಭಾ ಚುನಾವಣೆಗೆ ತನ್ನನ್ನು ಕಣಕ್ಕಿಳಿಸಿದ್ದಕ್ಕಾಗಿ ಬಿಜೆಪಿಗೆ ತನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಿ ಎಕ್ಸ್ ಪೋಸ್ಟ್ ಮಾಡಿರುವ ಕಂಗನಾ, “ನನ್ನ ಪ್ರೀತಿಯ ಭಾರತ ಮತ್ತು ಬಿಜೆಪಿಗೆ ಯಾವಾಗಲೂ ನನ್ನ ಬೇಷರತ್ ಬೆಂಬಲವಿದೆ, ಇಂದು ಬಿಜೆಪಿಯ ರಾಷ್ಟ್ರೀಯ ನಾಯಕತ್ವವು ನನ್ನ ಜನ್ಮಸ್ಥಳವಾದ ಹಿಮಾಚಲ ಪ್ರದೇಶ, ಮಂಡಿ (ಕ್ಷೇತ್ರ) ದಿಂದ ಲೋಕಸಭೆಯ ಅಭ್ಯರ್ಥಿಯಾಗಿ ನನ್ನನ್ನು ಘೋಷಿಸಿದೆ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಹೈಕಮಾಂಡ್ನ ನಿರ್ಧಾರ ಸಂಸತ ತಂದಿದೆ. ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳಲು ನಾನು ಗೌರವ ಮತ್ತು ಹರ್ಷ ಹೊಂದಿದ್ದೇನೆ. ನಾನು ಯೋಗ್ಯ ಕಾರ್ಯಕರ್ತೆ ಮತ್ತು ವಿಶ್ವಾಸಾರ್ಹ ಸಾರ್ವಜನಿಕ ಸೇವಕಿಯಾಗಲು ಎದುರು ನೋಡುತ್ತಿದ್ದೇನೆ” ಎಂದಿದ್ದಾರೆ.
ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ಒಡಿಶಾ, ರಾಜಸ್ಥಾನ, ಹರಿಯಾಣ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಕೇರಳ, ಕರ್ನಾಟಕ, ಗೋವಾ, ಗುಜರಾತ್, ಹಿಮಾಚಲ ಪ್ರದೇಶ, ಜಾರ್ಖಂಡ್, ಮಿಜೋರಾಂ, ಸಿಕ್ಕಿಂ, ತೆಲಂಗಾಣ ಲೋಕಸಭಾ ಕ್ಷೇತ್ರಗಳಿಗೆ 111 ಅಭ್ಯರ್ಥಿಗಳ ಹೆಸರನ್ನು ಪಕ್ಷ ಬಿಡುಗಡೆ ಮಾಡಿದೆ.
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸಂಬಲ್ಪುರದಿಂದ ಸ್ಪರ್ಧಿಸಲಿದ್ದಾರೆ ಮತ್ತು ಪಕ್ಷದ ವಕ್ತಾರ ಸಂಬಿತ್ ಪಾತ್ರ 2019 ರಲ್ಲಿ ಸೋತ ನಂತರ ಪುರಿಯಿಂದ ಮತ್ತೊಮ್ಮೆ ತಮ್ಮ ಅದೃಷ್ಟವನ್ನು ಪರೀಕ್ಷಿಸಲಿದ್ದಾರೆ.
My beloved Bharat and Bhartiya Janta’s own party, Bharatiya Janta party ( BJP) has always had my unconditional support, today the national leadership of BJP has announced me as their Loksabha candidate from my birth place Himachal Pradesh, Mandi (constituency) I abide by the high…
— Kangana Ranaut (@KanganaTeam) March 24, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.