ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ಸಾಧನೆಯ ಬ್ರಹ್ಮಾಸ್ತ್ರ ನಮ್ಮಲ್ಲಿದೆ. ಆ ಮೂಲಕ ಬಿಜೆಪಿ- ಜೆಡಿಎಸ್ ದಾಖಲೆಯ ಗೆಲುವು ಸಾಧಿಸಲು ಶ್ರಮಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕರೆನೀಡಿದರು.
ನಗರದ ದಿ ಕ್ಯಾಪಿಟಲ್ ಹೋಟೆಲ್ನಲ್ಲಿ ಇಂದು ಏರ್ಪಡಿಸಿದ ಬಿಜೆಪಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಕಾರಾತ್ಮಕ ಅಂಶಗಳನ್ನು ಜನರ ಮುಂದಿಡಿ. ಬಡವರು, ರೈತರು, ಮಹಿಳೆಯರು, ಯುವಜನತೆ ಎಂಬ 4 ವರ್ಗಗಳ ಜನರನ್ನು ನಾವು ತಲುಪಿ ಮೋದಿಯವರ ಸಾಧನೆಗಳನ್ನು ತಲುಪಿಸಬೇಕಿದೆ ಎಂದು ನುಡಿದರು.
ಕರ್ನಾಟಕ ರಾಜ್ಯವು ಬಿಜೆಪಿಗೆ ದಕ್ಷಿಣ ಭಾರತದ ಹೆಬ್ಬಾಗಿಲು ಎಂಬುದನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ರುಜುವಾತು ಮಾಡಬೇಕಿದೆ; ಇದಕ್ಕಾಗಿ ನಮ್ಮೆಲ್ಲರ ಶ್ರಮ ಅತ್ಯಗತ್ಯ ಎಂದು ತಿಳಿಸಿದರು.
ಮುಂದಿನ ಲೋಕಸಭಾ ಚುನಾವಣೆಯು ಈ ದೇಶದ ಭವಿಷ್ಯವನ್ನು ರೂಪಿಸಲಿದೆ. ಬಿಜೆಪಿ- ಜೆಡಿಎಸ್ ಎರಡೂ ಪಕ್ಷಗಳು ಒಗ್ಗಟ್ಟಾಗಿ ಶ್ರಮ ಹಾಕಿ ರಾಜ್ಯದ 28ಕ್ಕೆ 28 ಕ್ಷೇತ್ರಗಳಲ್ಲೂ ಗೆಲ್ಲಲು ಸಾಧ್ಯವಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಈ ಮೂಲಕ ನರೇಂದ್ರ ಮೋದಿಯವರ ಕೈಗಳನ್ನು ಬಲಪಡಿಸುವ ಚುನಾವಣೆ ಇದು ಎಂದು ವಿಶ್ಲೇಷಿಸಿದರು.
ದೇಶದೆಲ್ಲೆಡೆ ಬಿಜೆಪಿ ಪರ ಅಲೆ ಇದೆ. ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಈ ದೇಶದ ವಿರೋಧ ಪಕ್ಷಗಳು ಈಗಾಗಲೇ ತೀರ್ಮಾನ ಮಾಡಿವೆ. ಆದರೂ, ನಾವು ಚುನಾವಣೆಯನ್ನು ಸವಾಲಾಗಿ, ಗಂಭೀರವಾಗಿ ಸ್ವೀಕರಿಸಬೇಕು ಎಂದು ಅವರು ತಿಳಿಸಿದರು.
ಎಲ್ಲ 58 ಸಾವಿರ ಬೂತ್ಗಳನ್ನು ನೇರವಾಗಿ ತಲುಪಬೇಕಿದೆ. ನರೇಂದ್ರ ಮೋದಿಯವರ ಜನಪ್ರಿಯತೆ, ಜನಪರ ಯೋಜನೆಗಳನ್ನು ಮತವಾಗಿ ಪರಿವರ್ತಿಸುವ ಸವಾಲನ್ನು ಸ್ವೀಕರಿಸಿ ಎಂದು ಅವರು ಮನವಿ ಮಾಡಿದರು. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು ಒಂದು ಸುಳ್ಳನ್ನು ನೂರು ಬಾರಿ ಹೇಳಿ ಅಧಿಕಾರ ಪಡೆದಿದೆ. ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಗ್ಗೆ ತಪ್ಪು ನರೇಟಿವ್ ಅನ್ನು ಕಾಂಗ್ರೆಸ್ ಪಕ್ಷ ಮುಂದಿಟ್ಟಿತ್ತು ಎಂದು ವಿಶ್ಲೇಷಿಸಿದರು.
ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಸಮರ್ಪಕ ಬಳಕೆಯ ಸವಾಲನ್ನು ನಾವು ಸ್ವೀಕರಿಸಿ ಯಶಸ್ವಿಯಾಗಬೇಕು ಎಂದು ಅವರು ಸಲಹೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.