ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ಟುಟಿಕೋರಿನ್ ಪೊಲೀಸರು ರಾಜ್ಯದ ಮೀನುಗಾರಿಕಾ ಸಚಿವ ಅನಿತಾ ಆರ್ ರಾಧಾಕೃಷ್ಣನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
“ಕಾಮರಾಜ್ ಅವರು ಮಲಗಿದ್ದಾಗ ಅವರನ್ನು ಕೊಲ್ಲಲು ಬಯಸಿದವರು ನೀವು ಅಲ್ಲವೇ” ಎಂದು ರ್ಯಾಲಿಯಲ್ಲಿ ಪಿಎಂ ಮೋದಿಗೆ ಹೇಳಿರುವುದು ವೀಡಿಯೊದಲ್ಲಿ ಕೇಳಿಬಂದಿದೆ.
“ಬಿಜೆಪಿಯ ಪದಾಧಿಕಾರಿಗಳ ದೂರಿನ ಆಧಾರದ ಮೇಲೆ ನಾವು 294 ಬಿ (ಸಾರ್ವಜನಿಕವಾಗಿ ಅಶ್ಲೀಲ ಪದಗಳನ್ನು ಬಳಸುವುದು) ಅಡಿಯಲ್ಲಿ ಸಚಿವರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ” ಎಂದು ಮೇಘನಪುರಂ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೆ ಕಾಮರಾಜ್, ಹಿಂದಿನ ಮದ್ರಾಸ್ ರಾಜ್ಯದ ಮಾಜಿ ಮುಖ್ಯಮಂತ್ರಿ, ತಮಿಳುನಾಡಿನ ಕಾಂಗ್ರೆಸ್ ಐಕಾನ್ ಆಗಿದ್ದರು. ಕಳೆದ ವಾರ ಸೇಲಂನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಅವರು ಕಾಮರಾಜ್ ಅವರನ್ನುಉಲ್ಲೇಖಿಸಿ, ಅವರ ಪ್ರಾಮಾಣಿಕತೆ ಮತ್ತು ಮ ಕ್ರಾಂತಿಕಾರಿ ಯೋಜನೆಗಳು ಅವರಿಗೆ ದೊಡ್ಡ ಸ್ಫೂರ್ತಿಯಾಗಿದೆ ಎಂದು ಹೇಳಿದ್ದರು.
DMK leaders have reached a new low in their uncouth behaviour by passing vile comments & unpardonable public discourse against our Hon PM Thiru @narendramodi avl.
When they have nothing to criticise, this is the level DMK leaders have stooped. DMK MP Smt Kanimozhi avl was on… pic.twitter.com/sTdQSNjkir
— K.Annamalai (@annamalai_k) March 24, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.