ನವದೆಹಲಿ: ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಆದರೆ, ಬಿಹಾರದಲ್ಲಿ ಗುರುವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ಮೊದಲ ಹಂತದಲ್ಲಿ 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಲೋಕಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ತಮಿಳುನಾಡಿನ 39 ಸ್ಥಾನಗಳು, ರಾಜಸ್ಥಾನದ 12 ಸ್ಥಾನಗಳು, ಉತ್ತರ ಪ್ರದೇಶದ ಎಂಟು ಸ್ಥಾನಗಳು, ಮಧ್ಯಪ್ರದೇಶದ ಆರು ಸ್ಥಾನಗಳು, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ ಐದು ಸ್ಥಾನಗಳು, ಬಿಹಾರದ ನಾಲ್ಕು ಸ್ಥಾನಗಳು, ಪಶ್ಚಿಮ ಬಂಗಾಳದ ಮೂರು ಸ್ಥಾನಗಳು, ತಲಾ ಎರಡು ಸ್ಥಾನಗಳು ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯ ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರಾ, ಅನದಮನ್ ಮತ್ತು ನಿಕೋಬಾರ್ ದ್ವೀಪಗಳು, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಸ್ಥಾನಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ.
ಇದೇ 28ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಮಾರ್ಚ್ 30 ಕೊನೆಯ ದಿನವಾಗಿದೆ. ಬಿಹಾರದಲ್ಲಿ ಇದೇ 30ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಮುಂದಿನ ತಿಂಗಳು 2 ಕೊನೆಯ ದಿನವಾಗಿದೆ. ಏಪ್ರಿಲ್ 19 ರಂದು ಮತದಾನ ನಡೆಯಲಿದೆ.
ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 89 ಲೋಕಸಭಾ ಸ್ಥಾನಗಳಿಗೆ ಗುರುವಾರ ಎರಡನೇ ಹಂತದ ಅಧಿಸೂಚನೆ ಹೊರಡಿಸಲಾಗುವುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.