ನವದೆಹಲಿ: ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ನ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ಮಹಾರಾಜ್ ಅವರು ಮಂಗಳವಾರ 95 ನೇ ವಯಸ್ಸಿನಲ್ಲಿ ನಿಧನರಾದರು. ಅವರು ವಯೋಸಹಜ ಕಾಯಿಲೆಗಳಿಂದಾಗಿ ಜನವರಿ 29 ರಿಂದ ಆಸ್ಪತ್ರೆಗೆ ದಾಖಲಾಗಿದ್ದರು.
ಸ್ವಾಮಿ ಆತ್ಮಸ್ಥಾನಂದರ ಮರಣದ ನಂತರ ಸ್ವಾಮಿ ಸ್ಮರಣಾನಂದ ಮಹಾರಾಜ್ ಅವರು ರಾಮಕೃಷ್ಣ ಮಠ ಮತ್ತು ಮಿಷನ್ನ 16 ನೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.
ಮೂತ್ರನಾಳದ ಸೋಂಕಿನಿಂದ ಜನವರಿ 29 ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಸೆಪ್ಟಿಸಿಮಿಯಾ ಕಾಣಿಸಿಕೊಂಡಿದ್ದು, ಮಾರ್ಚ್ 3 ರಂದು ವೆಂಟಿಲೇಟರ್ನಲ್ಲಿ ಇರಿಸಲಾಗಿತ್ತು. ಅವರಿಗೆ ಮೂತ್ರಪಿಂಡದ ತೊಂದರೆಯೂ ಇದೆ ಎಂದು ವೈದ್ಯರು ತಿಳಿಸಿದ್ದಾರೆ.
ಸ್ವಾಮಿ ಸ್ಮರಣಾನಂದರು 1929 ರಲ್ಲಿ ತಮಿಳುನಾಡಿನ ತಂಜಾವೂರಿನಲ್ಲಿ ಜನಿಸಿದರು ಮತ್ತು ಅವರು 22 ನೇ ವಯಸ್ಸಿನಲ್ಲಿ 1952 ರಲ್ಲಿ ರಾಮಕೃಷ್ಣ ಮಿಷನ್ಗೆ ಸೇರಿದರು.
ಇತ್ತೀಚೆಗೆ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರು ಸ್ವಾಮಿ ಸ್ಮರಣಾನಂದ ಮಹಾರಾಜ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದರು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, “ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ನ ಪೂಜ್ಯ ಅಧ್ಯಕ್ಷರಾದ ಶ್ರೀಮತ್ ಸ್ವಾಮಿ ಸ್ಮರಣಾನಂದ ಜಿ ಮಹಾರಾಜ್ ಅವರು ತಮ್ಮ ಜೀವನವನ್ನು ಆಧ್ಯಾತ್ಮಿಕತೆ ಮತ್ತು ಸೇವೆಗೆ ಮುಡಿಪಾಗಿಟ್ಟರು. ಅವರು ಅಸಂಖ್ಯಾತ ಹೃದಯ ಮತ್ತು ಮನಸ್ಸಿನಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದಾರೆ” ಎಂದಿದಾರೆ.
Srimat Swami Smaranananda ji Maharaj, the revered President of Ramakrishna Math and Ramakrishna Mission dedicated his life to spirituality and service. He left an indelible mark on countless hearts and minds. His compassion and wisdom will continue to inspire generations.
I had… pic.twitter.com/lK1mYKbKQt
— Narendra Modi (@narendramodi) March 26, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.