ರಾಯ್ಪುರ: ಛತ್ತೀಸ್ಗಢದಲ್ಲಿ ನಕ್ಸಲರ ವಿರುದ್ಧ ಬೃಹತ್ ಕಾರ್ಯಾಚರಣೆಯನ್ನು ನಡೆಸಲಾಗಿದ್ದು, ಬರೋಬ್ಬರಿ ಆರು ಮಂದಿ ನಕ್ಸಲರು ಕೊಲಲ್ಪಟ್ಟಿದ್ದಾರೆ.
ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ಬುಧವಾರ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಮಹಿಳಾ ಕಾರ್ಯಕರ್ತರು ಸೇರಿದಂತೆ ಆರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಸಗುಡ ಪೊಲೀಸ್ ಠಾಣಾ ವ್ಯಾಪ್ತಿಯ ಚಿಪುರಭಟ್ಟಿ ಗ್ರಾಮದ ಬಳಿಯ ತಾಲ್ಪೇರು ನದಿ ತೀರದ ಅರಣ್ಯ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಮಹಾನಿರೀಕ್ಷಕ (ಬಸ್ತರ್ ರೇಂಜ್) ಸುಂದರರಾಜ್ ಪಿ ತಿಳಿಸಿದ್ದಾರೆ.
ಜಿಲ್ಲಾ ರಿಸರ್ವ್ ಗಾರ್ಡ್ (DRG), ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಮತ್ತು ಅದರ CoBRA (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ಗೆ ಸೇರಿದ ಸಿಬ್ಬಂದಿಗಳನ್ನು ಒಳಗೊಂಡ ತಂಡ ಕಾರ್ಯಾಚರಣೆಯನ್ನು ನಡೆಸಿದೆ. ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿಯಿಂದ ನಕ್ಸಲೈಟ್ಗಳ ಉಪಸ್ಥಿತಿಯ ಕುರಿತು ಪಡೆದ ಮಾಹಿತಿಯನ್ನು ಆಧರಿಸಿ ಈ ಕಾರ್ಯಾಚರಣೆಯನ್ನು ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ.
ಗುಂಡಿನ ಚಕಮಕಿಯನ್ನು ನಿಲ್ಲಿಸಿದ ನಂತರ ಮಹಿಳೆ ಸೇರಿದಂತೆ ಆರು ನಕ್ಸಲೀಯರ ಶವಗಳು ಮತ್ತು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಐಜಿ ತಿಳಿಸಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಹಲವು ನಕ್ಸಲರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ ಮತ್ತು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅವರು ಹೇಳಿದರು.
ಈ ಘಟನೆ ನಡೆದ ಬಿಜಾಪುರ ಜಿಲ್ಲೆಯು ಬಸ್ತಾರ್ ಲೋಕಸಭಾ ಕ್ಷೇತ್ರದಲ್ಲಿದ್ದು, ಇಲ್ಲಿ ಏಪ್ರಿಲ್ 19 ರಂದು ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.